64ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಕನ್ನಡಿಗರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ನಾಡಿನೆಲ್ಲೆಡೆ ಬಾರಿಸುವ ಕನ್ನಡ ಡಿಂಡಿಮ ಮೊಳಗುತ್ತಿದ್ದು, 64ನೇ ಕನ್ನಡ ರಾಜ್ಯೋತ್ಸವದ ಐತಿಹಾಸಿತ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ: ನಾಡಿನೆಲ್ಲೆಡೆ ಬಾರಿಸುವ ಕನ್ನಡ ಡಿಂಡಿಮ ಮೊಳಗುತ್ತಿದ್ದು, 64ನೇ ಕನ್ನಡ ರಾಜ್ಯೋತ್ಸವದ ಐತಿಹಾಸಿತ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿನವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾಗಿದ್ದು. ಬಹುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರು ಕನ್ನಡದಲ್ಲಿಯೇ ಶುಭಾಶಯ ಕೋರಿರುವ ಹಿನ್ನಲೆಯಲ್ಲಿ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿ ರೀ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


