ಆರ್‌ಸಿಇಪಿ ಕುರಿತ ಸೋನಿಯಾ ಧಿಡೀರ್ ಎಚ್ಚರಗೊಂಡಿದ್ದೇಕೆ? ಕೇಂದ್ರ ಸಚಿವ ಪಿಯೂಷ್ ಗೋಯಲ್ ಪ್ರಶ್ನೆ
ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ಒಪ್ಪಂದವನ್ನು ಅನುಮೋದಿಸುವ ಯಾವುದೇ ಕ್ರಮವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರೋಧಿಸುತ್ತಿರುವುದರ ನಡುವೆಯೇ...

ನವದೆಹಲಿ: ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ಒಪ್ಪಂದವನ್ನು ಅನುಮೋದಿಸುವ ಯಾವುದೇ ಕ್ರಮವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರೋಧಿಸುತ್ತಿರುವುದರ ನಡುವೆಯೇ ಇದ್ದಕ್ಕಿದ್ದಂತೆ ಅವರು ಎಚ್ಚರಗೊಂಡಿರುವುದೇಕೆ? ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಶನಿವಾರ ತಡರಾತ್ರಿ ವಾಗ್ದಾಳಿ ನಡೆಸಿದ್ದಾರೆ.
‘2007 ರಲ್ಲಿ ಭಾರತ-ಚೀನಾ ಎಫ್‌ಟಿಎ(ಮುಕ್ತ ವಾಣಿಜ್ಯ ಒಪ್ಪಂದ) ಬಗ್ಗೆ ಯುಪಿಎ ಸರ್ಕಾರ ಒಪ್ಪಿಕೊಂಡಾಗ ಸೋನಿಯಾ ಗಾಂಧಿ ಎಲ್ಲಿದ್ದರು? ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ತಮಗೆ ಆದ ಈ ಅವಮಾನದ ವಿರುದ್ಧ ಮಾತನಾಡುತ್ತಾರೆ ಎಂದು ನಾನು ಭಾವಿಸುತ್ತೇನೆ,’ ಎಂದು ಗೋಯಲ್ ಸರಣಿ ಟ್ವೀಟ್‌ಗಳಲ್ಲಿ ಬರೆದಿದ್ದಾರೆ.
ಆರ್‌ಸಿಇಪಿ ಒಪ್ಪಂದದಿಂದ ದೇಶಕ್ಕೆ ಮಾರಕ ಎಂದು ಸೋನಿಯಾ ಗಾಂಧಿ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


