ಮಹಾಕಗ್ಗಂಟು: 170 ಶಾಸಕರ ಬೆಂಬಲವಿದೆ- ಶಿವಸೇನೆ
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ತಮ್ಮಗೆ 170ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. ಶಿವಸೇನೆಗೆ ಬೆಂಬಲ ನೀಡುವ ಶಾಸಕರ ಸಂಖ್ಯೆ 175ಕ್ಕೆ ಏರಿಕೆ ಆಗಬಹುದು ಎಂದು ಅವರು ತಿಳಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ತಮ್ಮಗೆ 170ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. ಶಿವಸೇನೆಗೆ ಬೆಂಬಲ ನೀಡುವ ಶಾಸಕರ ಸಂಖ್ಯೆ 175ಕ್ಕೆ ಏರಿಕೆ ಆಗಬಹುದು ಎಂದು ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಹುದ್ದೆ ಹಂಚಿಕೆ ಕುರಿತ ತಮ್ಮ ಬೇಡಿಕೆಯನ್ನು ಬಿಜೆಪಿ ಒಪ್ಪಿಕೊಳ್ಳದಿದ್ದರೆ ಕಾಂಗ್ರೆಸ್, ಎನ್ ಸಿಪಿ ಬೆಂಬಲದೊಂದಿಗೆ ಸರ್ಕಾರ ರಚಿಸಲಾಗುವುದು . ತಮ್ಮ ಬೆಂಬಲವಿಲ್ಲದೆ ಸರ್ಕಾರ ರಚಿಸಿದರೆ ಬಿಜೆಪಿ ಬಹುಮತ ಸಾಬೀತುಪಡಿಸುವುದು ಕಷ್ಟಕರವಾಗಲಿದೆ ಎಂದು ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ.
ತಲಾ ಎರಡೂ ವರೆ ವರ್ಷ ಮುಖ್ಯಮಂತ್ರಿ ಹುದ್ದೆ ಹಾಗೂ ಸಂಪುಟದಲ್ಲಿ ಸಮಾನವಾಗಿ ಖಾತೆ ಹಂಚಿಕೆ ಸಂಬಂಧ ಬಿಜೆಪಿ ಹಾಗೂ ಶಿವಸೇನೆ ನಡುವಣ ಭಿನ್ನಾಭಿಪ್ರಾಯ ತಲೆದೋರಿದೆ. ದೇವೇಂದ್ರ ಫಡ್ನವೀಸ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರೆಸಲು ಬಿಜೆಪಿ ಪಟ್ಟು ಹಿಡಿದಿದ್ದರೆ ಶಿವಸೇನಾ ತನ್ನ ನಿಲುವಿಗೆ ಅಂಟಿಕೊಂಡಿದೆ.
56 ಸದಸ್ಯರೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿರುವ ಶಿವಸೇನಾ, ಬಿಜೆಪಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದಲ್ಲೀ ಕಾಂಗ್ರೆಸ್ , ಎನ್ ಸಿಪಿ ಶಾಸಕರ ನೆರವು ಪಡೆದುಕೊಂಡರೆ 170 ಶಾಸಕರ ಬೆಂಬಲ ಸಿಗಲಿದೆ ಎಂದು ಶಿವಸೇನೆ ಹೇಳಿದೆ.
ಶಿವಸೇನಾ, ಕಾಂಗ್ರೆಸ್ ಹಾಗೂ ಎನ್ ಸಿಪಿಯ ಸೈದಾಂತಿಕ ವಿಚಾರಗಳು ಬೇರೆ ಬೇರೆಯಾಗಿದ್ದರೂ ಸಮನ್ವಯತೆಯಿಂದ ಸರ್ಕಾರವನ್ನು ಮುನ್ನಡೆಸಲಾಗುವುದು ಎಂದು ಅದು ಹೇಳಿಕೊಂಡಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದೆಹಲಿ ಸರ್ಕಾರವನ್ನು ನಡೆಸಿದಂತೆ ಎಲ್ಲರನ್ನೂ ಜೊತೆಯಾಗಿ ಕರೆದುಕೊಂಡು ಹೋಗಲಾಗುವುದು ಎಂದು ಶಿವಸೇನೆ ತಿಳಿಸಿದೆ. ಸರ್ಕಾರ ರಚನೆ ಬಗ್ಗೆ ಕಾಯ್ದು ನೋಡಲಾಗುತ್ತಿದೆ ಎಂದು ರಾವತ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


