ಕಾಂಗ್ರೆಸ್ ಒತ್ತಡಕ್ಕೆ ಮಣಿದು ಆರ್‌ಸಿಇಪಿಯಿಂದ ಹಿಂದೆ ಸರಿದ ಪ್ರಧಾನಿ ಮೋದಿ; ಸುರ್ಜೇವಾಲ
ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾದೇಶಿಕ ಸಂಗ್ರಹ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ವ್ಯಾಪಾರದ ಒಪ್ಪಂದದಿಂದ ಹಿಂದೆ ಸರಿಯಲು ವಿಪಕ್ಷ ಕಾಂಗ್ರೆಸ್ ಹಾಗೂ ಅದರ ಮುಖಂಡ ರಾಹುಲ್ ಗಾಂಧಿ ಅವರು ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾದೇಶಿಕ ಸಂಗ್ರಹ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ವ್ಯಾಪಾರದ ಒಪ್ಪಂದದಿಂದ ಹಿಂದೆ ಸರಿಯಲು ವಿಪಕ್ಷ ಕಾಂಗ್ರೆಸ್ ಹಾಗೂ ಅದರ ಮುಖಂಡ ರಾಹುಲ್ ಗಾಂಧಿ ಅವರು ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಐಸಿಸಿ ಸಂಪರ್ಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ‘ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರ ತೀವ್ರ ಒತ್ತಡದಿಂದ ಬಿಜೆಪಿ ಸರ್ಕಾರ ರೈತರು, ಹಾಲು ಉತ್ಪಾದಕರು, ಮೀನುಗಾರರು, ಸಣ್ಣ ಮತ್ತು ಮಧ್ಯಮ ವ್ಯವಹಾರಸ್ತರಿಗೆ ಅನಾನುಕೂಲವಾಗುವಂತಹ ಒಪ್ಪಂದದಿಂದ ಹಿಂದೆ ಸರಿಯುವಂತಾಯಿತು’ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಒಪ್ಪಂದದಿಂದ ಭಾರತೀಯರ ಜೀವನ ಮತ್ತು ಸಮಾಜದ ದುರ್ಬಲ ವರ್ಗಗಳಿಗೆ ಹಾನಿಯಾಗುತ್ತದೆ. ಆದ್ದರಿಂದ ಮೋದಿ ಅವರು, ಮಹಾತ್ಮಾ ಗಾಂಧಿ ಅವರ ದುರ್ಬಲ ವರ್ಗದವರಿಗೆ ನೆರವಾಗುವ ಹೇಳಿಕೆಗಳನ್ನು ಸ್ಮರಿಸಿ, ಒಪ್ಪಂದದಿಂದ ಹಿಂದೆ ಸರಿದಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ವಿಜಯ್ ಠಾಕೂರ್ ಸಿಂಗ್ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


