ಮಹಾ ಸರ್ಕಾರ ರಚನೆ: ಅಮಿತ್ ಶಾ ಭೇಟಿ ನಂತರ ದೇವೇಂದ್ರ ಫಡ್ನವೀಸ್ ಹೇಳಿದ್ದಿಷ್ಟು
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಗೊಂದಲ ಮುಂದುವರೆದಿದ್ದು ಈ ನಡುವೆ ಹಂಗಾಮಿ ಸಿಎಂ ದೇವೇಂದ್ರ ಫಡ್ನವೀಸ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಗೊಂದಲ ಮುಂದುವರೆದಿದ್ದು ಈ ನಡುವೆ ಹಂಗಾಮಿ ಸಿಎಂ ದೇವೇಂದ್ರ ಫಡ್ನವೀಸ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ದೇವೇಂದ್ರ ಫಡ್ನವೀಸ್, ಸರ್ಕಾರ ರಚನೆ ಸಂಬಂಧ ಬಹಳಷ್ಟು ಜನರು ಮಾತನಾಡುತ್ತಿದ್ದಾರೆ. ಆದರೆ ಬಿಜೆಪಿ ಪರವಾಗಿ ನಾನು ಅದ್ಯಾವುದಕ್ಕೂ ಪ್ರತಿಕ್ರಿಯೆ ನೀಡುವುದಿಲ್ಲ. ಶೀಘ್ರವೇ ಸರ್ಕಾರದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ ಈ ಬಗ್ಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ರೈತರಿಗೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಕೊಡುವುದಕ್ಕೆ ಕೇಂದ್ರದಿಂದ ಮತ್ತಷ್ಟು ನೆರವು ಅಗತ್ಯವಿರುವುದರ ಬಗ್ಗೆ ದೇವೇಂದ್ರ ಫಡ್ನವೀಸ್ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


