ಮಹಾರಾಷ್ಟ್ರದ ಮುಂದಿನ ಸಿಎಂ ಶಿವಸೇನೆಯಿಂದ: ಸಂಜಯ್ ರಾವತ್
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಗಡುವು ನೀಡಿರುವ ಮಧ್ಯೆ ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್, ರಾಜ್ಯದಲ್ಲಿ ಮುಂದಿನ ಶಿವಸೇನೆಯ ನಾಯಕ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಪುನರುಚ್ಛರಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಗಡುವು ನೀಡಿರುವ ಮಧ್ಯೆ ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್, ರಾಜ್ಯದಲ್ಲಿ ಮುಂದಿನ ಶಿವಸೇನೆಯ ನಾಯಕ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಪುನರುಚ್ಛರಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಚಿತ್ರಣ ಬದಲಾಗಿದ್ದು, ನ್ಯಾಯಕ್ಕಾಗಿ ಹೋರಾಡುತ್ತಿರುವ ತಮ್ಮ ಪಕ್ಷಕ್ಕೆ ಜಯ ಸಿಗಲಿದೆ ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಯಾವ ಸರ್ಕಾರ ರಚನೆಯಾಗಬೇಕು, ಯಾರು ಮುಖ್ಯಮಂತ್ರಿಯಾಗಬೇಕು ಎಂಬ ನಿರ್ಧಾರ ಮಹಾರಾಷ್ಟ್ರದಲ್ಲಿಯೇ ಆಗುತ್ತದೆ, ಶಿವಸೇನೆಯಿಂದ ಮುಖ್ಯಮಂತ್ರಿಯಾಗುತ್ತಾರೆ ಎಂದು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಶಿವಸೇನೆ ಎನ್ ಸಿಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂದು ಕೇಳಿದಾಗ ಶರದ್ ಪವಾರ್ ಮುಂದಿನ ಮುಖ್ಯಮಂತ್ರಿಯಾಗುವುದಿಲ್ಲ ಎಂದರು.
ಮುಖ್ಯಮಂತ್ರಿ ಹುದ್ದೆ ಬಗ್ಗೆ ಬಿಜೆಪಿ-ಶಿವಸೇನೆ ಮಧ್ಯೆಕಳೆದ 10-12 ದಿನಗಳಿಂದಲೂ ಎರಡೂ ಪಕ್ಷಗಳ ಮಧ್ಯೆ ಅಕ್ಷರಶಃ ಕದನ ನಡೆಯುತ್ತಿದೆ. 288 ಸದಸ್ಯಬಲದ ವಿಧಾನಸಭೆಯಲ್ಲಿ 145 ಸ್ಥಾನಗಳನ್ನು ಹೊಂದಿದರೆ ಸರ್ಕಾರ ರಚನೆ ಮಾಡಬಹುದು. ಬಿಜೆಪಿ-ಶಿವಸೇನೆ ಮೈತ್ರಿಕೂಟಕ್ಕೆ 161 ಸದಸ್ಯ ಬಲವಿದ್ದರೂ ಮುಖ್ಯಮಂತ್ರಿ ಹುದ್ದೆಯ ಹಗ್ಗ-ಜಗ್ಗಾಟದಿಂದ ಸರ್ಕಾರ ರಚನೆ ವಿಳಂಬವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


