'ಭಾರತದಲ್ಲಿನ ವಾಯು ಮಾಲಿನ್ಯಕ್ಕೆ ಪಾಕಿಸ್ತಾನ-ಚೀನಾ ಕಾರಣ'!
ಭಾರತದಲ್ಲಿ ಉಂಟಾಗಿರುವ ವಾಯು ಮಾಲಿನ್ಯಕ್ಕೆ ಪಾಕಿಸ್ತಾನ ಹಾಗೂ ಚೀನಾ ಕಾರಣ ಎಂದು ಉತ್ತರ ಪ್ರದೇಶ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಲಖನೌ: ಭಾರತದಲ್ಲಿ ಉಂಟಾಗಿರುವ ವಾಯು ಮಾಲಿನ್ಯಕ್ಕೆ ಪಾಕಿಸ್ತಾನ ಹಾಗೂ ಚೀನಾ ಕಾರಣ ಎಂದು ಉತ್ತರ ಪ್ರದೇಶ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಹದಗೆಡುತ್ತಿರುವ ವಾಯುಗುಣಮಟ್ಟಕ್ಕೆ ಚೀನಾ ಹಾಗೂ ಪಾಕಿಸ್ತಾನವನ್ನು ದೂಷಿಸಬೇಕು. ಏಕೆಂದರೆ ಭಾರತದೆಡೆಗೆ ವಿಷ ಅನಿಲಗಳನ್ನು ಬಿಡುಗಡೆಗೆ ಮಾಡುತ್ತಿವೆ. ಇದರಿಂದಾಗಿ ರಾಷ್ಟ್ರರಾಜಧಾನಿಯಲ್ಲಿ ವಾಯುಗುಣಮಟ್ಟ ಹದಗೆಟ್ಟಿದೆ ಎಂದು ಬಿಜೆಪಿ ನಾಯಕ ವಿನೀತ್ ಅಗರ್ವಾಲ್ ಶಾರ್ದ ಹೇಳಿದ್ದಾರೆ.
ಪಾಕಿಸ್ತಾನ ನಮ್ಮ ದೇಶದ ಮೇಲೆ ವಿಷ ಅನಿಲ ಪ್ರಯೋಗ ಮಾಡಿದೆಯೇ ಎಂಬುದನ್ನ ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅಧಿಕಾರ ವಹಿಸಿಕೊಂಡಾಗಿನಿಂದಲೂ ಸಹ ಪಾಕಿಸ್ತಾನದ ಭಾರತ ದ್ವೇಷ ಹೆಚ್ಚಿದೆ. ಪ್ರತಿ ಬಾರಿ ಭಾರತದೊಂದಿಗೆ ಸೆಣೆಸಿದಾಗಲೂ ಪಾಕಿಸ್ತಾನ ಸೋತಿದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ.
ಇದೇ ವೇಳೆ ವಾಯುಗುಣಮಟ್ಟ ಕುಸಿಯುವುದಕ್ಕೆ ರೈತರು ಹಾಗೂ ಕೈಗಾರಿಕೋದ್ಯಮಿಗಳನ್ನು ದೂಷಿಸಬಾರದು ಎಂದು ಹೇಳಿರುವ ಅವರು, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೂ ಸೇರಿದಂತೆ ಬಹುತೇಕ ಜನರು ಕೈಗಾರಿಕೆ ಹಾಗೂ ಕೃಷಿ ತ್ಯಾಜ್ಯಗಳನ್ನು ಸುಡುವುದರಿಂದ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಹೇಳುತ್ತಿದ್ದಾರೆ ಆದರೆ ರೈತರು ನಮ್ಮ ದೇಶದ ಬೆನ್ನೆಲುಬು, ರೈತರು ಹಾಗೂ ಕೈಗಾರಿಕೆಗಳನ್ನು ದೂಷಿಸಬಾರದು ಎಂಬುದು ವಿನೀತ್ ಅಗರ್ವಾಲ್ ಶಾರ್ದ ಅಭಿಪ್ರಾಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


