ಅಯೋಧ್ಯೆ ಸಂಬಂಧ ಅನಗತ್ಯ ಹೇಳಿಕೆಗಳನ್ನು ನೀಡದಿರಿ: ಸಚಿವರಿಗೆ ಪ್ರಧಾನಿ ಮೋದಿ ಸೂಚನೆ
ದೇಶದಲ್ಲಿ ಸೌಹಾರ್ದತೆ ಹಾಗೂ ಸಾಮರಸ್ಯದ ವಾತಾವರಣ ಕಾಪಾಡುವ ಅಗತ್ಯವಿದ್ದು, ಅಯೋಧ್ಯೆ ವಿವಾದ ಸಂಬಂಧ ಅನಗತ್ಯ ಹೇಳಿಕೆಗಳನ್ನು ನೀಡದಿರಿ ಎಂದು ಕೇಂದ್ರ ಸಚಿವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚಿಸಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ದೇಶದಲ್ಲಿ ಸೌಹಾರ್ದತೆ ಹಾಗೂ ಸಾಮರಸ್ಯದ ವಾತಾವರಣ ಕಾಪಾಡುವ ಅಗತ್ಯವಿದ್ದು, ಅಯೋಧ್ಯೆ ವಿವಾದ ಸಂಬಂಧ ಅನಗತ್ಯ ಹೇಳಿಕೆಗಳನ್ನು ನೀಡದಿರಿ ಎಂದು ಕೇಂದ್ರ ಸಚಿವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚಿಸಿದ್ದಾರೆಂದು ತಿಳಿದುಬಂದಿದೆ.
ಅಯೋಧ್ಯೆ ವಿವಾದ ಸಂಬಂಧದ ತೀರ್ಪು ಇನ್ನು ಕೆಲವೇ ದಿನಗಳಲ್ಲಿ ಸುಪ್ರೀಂಕೋರ್ಟ್ ನೀಡಲಿದೆ. ಈ ಹಿನ್ನಲೆಯಲ್ಲಿ ತಮ್ಮ ಸಂಪುಟದ ಸಚಿವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.
ಸಭೆ ವೇಳೆ ರಾಷ್ಟ್ರದಲ್ಲಿ ಸೌಹಾರ್ದತೆ ಮತ್ತು ಸಾಮರಸ್ಯದ ವಾತಾವರಣ ಕಾಪಾಡಿಕೊಳ್ಳುವ ಅಗತ್ಯವಿದ್ದು, ಅಯೋಧ್ಯೆ ವಿವಾದ ಸಂಬಂಧ ನೀಡುವ ಅನಗತ್ಯ ಹೇಳಿಕೆಗಳನ್ನು ನಿಯಂತ್ರಿಸಿ ಎಂದು ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ. ಅಲ್ಲದೆ ವಿವಾದ ಸಂಬಂಧ ನ್ಯಾಯಾಲಯ ಯಾವುದೇ ರೀತಿಯ ತೀರ್ಪು ನೀಡಿದರೂ ಅದನ್ನು ಸೋಲು ಹಾಗೂ ವಿಜಯದ ದೃಷ್ಟಿಯಿಂದ ನೋಡದಂತೆ, ಶಾಂತಿ ಕಾಪಾಡುವ ಸಲುವಾಗಿ ತಮ್ಮ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡುವಂತೆಯೂ ಸೂಚಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


