ಇಂಡಿಯಾ ಗೇಟ್ ಬಳಿ ನೇತಾಜಿ ಪ್ರತಿಮೆ ನಿರ್ಮಿಸಿ: ಚಂದ್ರಕುಮಾರ್ ಬೋಸ್
ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ನಿರ್ಮಿಸಬೇಕು ಎಂದು ನೇತಾಜಿ ಸೋದರ ಸಂಬಂಧಿ ಹಾಗೂ ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಆಗ್ರಹಿಸಿದ್ದಾರೆ.

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ನಿರ್ಮಿಸಬೇಕು ಎಂದು ನೇತಾಜಿ ಸೋದರ ಸಂಬಂಧಿ ಹಾಗೂ ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಆಗ್ರಹಿಸಿದ್ದಾರೆ.
ಇಂಡಿಯಾ ಗೇಟ್ ನಲ್ಲಿ ನೇತಾಜಿ ಪ್ರತಿಮೆ ಹಾಗೂ ರಾಷ್ಟ್ರ ರಾಜಧಾನಿ ದೆಹಲಿಯ ರಾಜಪತ್ ನಲ್ಲಿ ಐಎನ್ ಎ ಸ್ಮಾರಕ ನಿರ್ಮಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಪಿಎಂಒ ಗೆ ಟ್ಯಾಗ್ ಮಾಡಿದ್ದಾರೆ.
ಜನವರಿ 23, 1897 ರಂದು ಒಡಿಶಾದ ಕಟಕ್‌ನಲ್ಲಿ ಜನಿಸಿದ ನೇತಾಜಿ ಸುಭಾಸ್ ಚಂದ್ರ ಬೋಸ್ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದರು. ಎರಡನೆಯ ಮಹಾಯುದ್ಧದ ಆರಂಭದಲ್ಲಿ, 200 ವರ್ಷಗಳ ಹಳೆಯ ಬ್ರಿಟಿಷ್ ಆಡಳಿತದ ಹಿಡಿತದಿಂದ ಭಾರತವನ್ನು ಮುಕ್ತಗೊಳಿಸುವ ಪ್ರಯತ್ನದಲ್ಲಿ ಅವರು ತಮ್ಮ ನಾಯಕತ್ವದಲ್ಲಿ ಭಾರತೀಯ ರಾಷ್ಟ್ರೀಯ ಸೇನೆ (ಐಎನ್‌ಎ) ಅಥವಾ ಆಜಾದ್ ಹಿಂದ್ ಫೌಜ್ ಅನ್ನು ಪುನರುಜ್ಜೀವನಗೊಳಿಸಿದರು.
ನೇತಾಜಿ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮತ್ತು ಬಂಗಾಳ ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.
ಅವರು ವ್ಯಾಪಕವಾಗಿ ವಿದೇಶ ಪ್ರವಾಸ ಕೈಗೊಂಡರು, ಆಗ ಸೋವಿಯತ್ ಒಕ್ಕೂಟ, ಜರ್ಮನಿ ಮತ್ತು ರಷ್ಯಾಕ್ಕೆ ಭೇಟಿ ನೀಡಿದರು ಮತ್ತು ಭಾರತದಲ್ಲಿ ಬ್ರಿಟಿಷ್ ಸರ್ಕಾರದ ಮೇಲೆ ದಾಳಿ ಮಾಡಲು ಪ್ರತಿಯೊಬ್ಬರ ಜೊತೆ ಮೈತ್ರಿ ಮಾಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


