ಚಿನ್ಮಯಾನಂದ ಕೇಸ್: ರೇಪ್ ಸಂತ್ರಸ್ತೆ ಕುಟುಂಬಕ್ಕೆ ಎಸ್ ಐಟಿಯಿಂದ ಕಿರುಕುಳ
ರಾಷ್ಟ್ರಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಚಿನ್ಮಯಾನಂದ ಅತ್ಯಾಚಾರ ಕೇಸ್ ನ ರೇಪ್ ಸಂತ್ರಸ್ತೆ ಕುಟುಂಬಕ್ಕೆ ವಿಚಾರಣೆ ವೇಳೆ ವಿಶೇಷ ತನಿಖಾ ತಂಡ ದೈಹಿಕ ಕಿರುಕುಳ ನೀಡಿದೆ.

ಲಕ್ನೋ: ರಾಷ್ಟ್ರಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಚಿನ್ಮಯಾನಂದ ಅತ್ಯಾಚಾರ ಕೇಸ್ ನ ರೇಪ್ ಸಂತ್ರಸ್ತೆ ಕುಟುಂಬಕ್ಕೆ ವಿಚಾರಣೆ ವೇಳೆ ವಿಶೇಷ ತನಿಖಾ ತಂಡ ದೈಹಿಕ ಕಿರುಕುಳ ನೀಡಿದೆ ಎಂದು ಅಲಹಾಬಾದ್ ಹೈಕೋರ್ಟ್ ಗೆ ಸಂತ್ರಸ್ತೆಯ ಕುಟುಂಬ ಸದಸ್ಯರು 15 ಪುಟಗಳ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಜೊತೆಗೆ ತನಿಖಾ ತಂಡದ ಮೇಲೆ ತಮಗೆ ವಿಶ್ವಾಸವಿಲ್ಲ, ನ್ಯಾಯಯುತ ತನಿಖೆ ನಡೆಯುವುದಿಲ್ಲ ಎಂದು ಕುಟುಂಬಸ್ಥರು ಆತಂಕ ವ್ಯಕ್ತ ಪಡಿಸಿದ್ದಾರೆ. ಸಂತ್ರಸ್ತೆಯ ಸಹೋದರ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಎಸ್ ಐಟಿ ತಂಡ ತಮಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದೆ ಹಾಗೂ ಕುಟುಂಬದ ಎಲ್ಲಾ ಸದಸ್ಯರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿದೆ ಎಂದು ಆರೋಪಿಸಲಾಗಿದೆ.
ನವೆಂಬರ್ 1 ರಂದು ಶಹಜಹಾನ್ಪುರದ ಎಸ್ಐಟಿ ಕಚೇರಿಯಲ್ಲಿ ತಾಯಿ, ತಂದೆ ಮತ್ತು ಸಹೋದರನನ್ನು ದೈಹಿಕವಾಗಿ ನಿಂದಿಸಲಾಗಿದೆ ಎಂದು ಆರೋಪಿಸಿದ ನಂತರ ಭಯದಿಂದ ಕುಟುಂಬ ಭೂಗತವಾಗಿತ್ತು.
ರಾಷ್ಟ್ರಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಚಿನ್ಮಯಾನಂದ ಅತ್ಯಾಚಾರ ಕೇಸ್ ನ ರೇಪ್ ಸಂತ್ರಸ್ತೆ ಕುಟುಂಬಕ್ಕೆ ವಿಚಾರಣೆ ವೇಳೆ ವಿಶೇಷ ತನಿಖಾ ತಂಡ ದೈಹಿಕ ಕಿರುಕುಳ ನೀಡಿದೆ ಎಂದು ಅಲಹಾಬಾದ್ ಹೈಕೋರ್ಟ್ ಗೆ ಸಂತ್ರಸ್ತೆಯ ಕುಟುಂಬ ಸದಸ್ಯರು 15 ಪುಟಗಳ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಜೊತೆಗೆ ತನಿಖಾ ತಂಡದ ಮೇಲೆ ತಮಗೆ ವಿಶ್ವಾಸವಿಲ್ಲ, ನ್ಯಾಯಯುತ ತನಿಖೆ ನಡೆಯುವುದಿಲ್ಲ ಎಂದು ಕುಟುಂಬಸ್ಥರು ಆತಂಕ ವ್ಯಕ್ತ ಪಡಿಸಿದ್ದಾರೆ. ಸಂತ್ರಸ್ತೆಯ ಸಹೋದರ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಎಸ್ ಐಟಿ ತಂಡ ತಮಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದೆ ಹಾಗೂ ಕುಟುಂಬದ ಎಲ್ಲಾ ಸದಸ್ಯರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿದೆ ಎಂದು ಆರೋಪಿಸಲಾಗಿದೆ.
ನವೆಂಬರ್ 1 ರಂದು ಶಹಜಹಾನ್ಪುರದ ಎಸ್ಐಟಿ ಕಚೇರಿಯಲ್ಲಿ ತಾಯಿ, ತಂದೆ ಮತ್ತು ಸಹೋದರನನ್ನು ದೈಹಿಕವಾಗಿ ನಿಂದಿಸಲಾಗಿದೆ ಎಂದು ಆರೋಪಿಸಿದ ನಂತರ ಭಯದಿಂದ ಕುಟುಂಬ ಭೂಗತವಾಗಿತ್ತು..
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


