ರಜನಿಕಾಂತ್ ಬಿಜೆಪಿ ಸೇರಿಲ್ಲ: ಮುರಳೀಧರ್ ರಾವ್ ಸ್ಪಷ್ಟನೆ
ಖ್ಯಾತ ತಮಿಳು ನಟ ರಜನಿಕಾಂತ್ ಅವರು ಬಿಜೆಪಿ ಸೇರಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಚೆನ್ನೈ: ಖ್ಯಾತ ತಮಿಳು ನಟ ರಜನಿಕಾಂತ್ ಅವರು ಬಿಜೆಪಿ ಸೇರಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ರಜನಿಕಾಂತ್ ಅವರ ಬಗ್ಗೆ ಯಾವುದೇ ತಪ್ಪು ಕಲ್ಪನೆ ಇಲ್ಲ. ಅವರು ಬಿಜೆಪಿ ಸೇರಿದ್ದಾರೆ ಎಂದು ನಾವು ಯಾವತ್ತೂ ಹೇಳಿಲ್ಲ ಮತ್ತು ಅವರು ಬಿಜೆಪಿ ಸೇರಲು ಸಿದ್ಧರಿದ್ದಾರೆ ಎಂದು ಸಹ ಹೇಳಿಲ್ಲ ಎಂದು ಮುರಳೀಧರ್ ರಾವ್ ಅವರು ಹೇಳಿದ್ದಾರೆ.
ಇತ್ತೀಚಿಗೆ ಹೊಸದಾಗಿ 6 ಕೋಟಿ ಜನ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ. ಇದರೊಂದಿಗೆ ನಮ್ಮ ಪಕ್ಷದ ಸದಸ್ಯರ ಸಂಖ್ಯೆ 17 ರಿಂದ 18 ಕೋಟಿಗೆ ಏರಿಕೆಯಾಗಿದೆ ಎಂದರು.
ಇಂದು ಬೆಳಗ್ಗೆಯಷ್ಟೇ ಹಿರಿಯ ನಟ ರಜನಿಕಾಂತ್ ಅವರು, ತಿರುವಳ್ಳುವರ್ ಜೊತೆಗೆ ತಮ್ಮನ್ನು ಕೇಸರಿ ಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಇತ್ತೀಚಿಗೆ ತಮಿಳಿನ ಸಂತ ಕವಿ ತಿರುವಳ್ಳುವರ್ ಪ್ರತಿಮೆಗೆ ಕೇಸರಿಕರಣಗೊಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸೂಪರ್ ಸ್ಟಾರ್ ರಜನಿಕಾಂತ್, ತಿರುವಳ್ಳುವರ್ ಜೊತೆಗೆ ತಮ್ಮನ್ನು ಕೇಸರಿಕರಣಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


