ದೇಶ

ಅಯೋಧ್ಯೆ ತೀರ್ಪು ನೀಡಿದ ಪಂಚಪೀಠದ ನ್ಯಾ. ಅಬ್ದುಲ್ ನಜೀರ್ ಕನ್ನಡಿಗರು!

ಅಯೋಧ್ಯೆ ಭೂ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಉಚ್ಛ ನ್ಯಾಯಾಲಯ...

ಅಯೋಧ್ಯೆ ತೀರ್ಪು ನೀಡಿದ ಪಂಚಪೀಠದ ನ್ಯಾ. ಅಬ್ದುಲ್ ನಜೀರ್ ಕನ್ನಡಿಗರು!
ಅಬ್ದುಲ್ ನಜೀರ್
Published On :

ಮಂಗಳೂರು: ಅಯೋಧ್ಯೆ ಭೂ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಉಚ್ಛ ನ್ಯಾಯಾಲಯ, ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ ಜಮೀನು ನೀಡಲು ತನ್ನ ತೀರ್ಪಿನಲ್ಲಿ ಆದೇಶಿಸಿದೆ.

ಈ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ ಪಂಚಪೀಠವೂ ಸಿಜೆಐ ರಂಜನ್ ಗೋಗೊಯಿ, ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಸದಸ್ಯರನ್ನು ಒಳಗೊಂಡಿತ್ತು .

ಪಂಚಪೀಠದ ಸದಸ್ಯರಲ್ಲಿ ಒಬ್ಬರಾಗಿರುವ ನ್ಯಾಯಮೂರ್ತಿ ಅಬ್ದುಲ್ ನಜೀರ್ ಕರಾವಳಿಯವರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಸಮೀಪದ ಬೆಳುವಾಯಿ ಅವರ ಹುಟ್ಟೂರು. 

ಜ. 5, 1958ರಲ್ಲಿ ಹುಟ್ಟಿದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಬೆಳುವಾಯಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ಆ ಬಳಿಕ ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದರು. ಆ ನಂತರ ಮಂಗಳೂರಿನ ಎಸ್ ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದಾರೆ.

ಅಬ್ದುಲ್ ನಜೀರ್ ಅವರು ಇಂದು ಅಯೋಧ್ಯೆ ಪ್ರಕರಣದ ಐತಿಹಾಸಿಕ ತೀರ್ಪು ನೀಡಿದ ಪಂಚ ಸದಸ್ಯ ಪೀಠದ ಏಕಮಾತ್ರ ಮುಸ್ಲಿಂ ನ್ಯಾಯಾಧೀಶರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.