ಕಣಿವೆಯಲ್ಲಿ ಮತ್ತೆ ಉಗ್ರ ಹಾವಳಿ, ಸೇನೆಯ ಗುಂಡಿಗೆ ಓರ್ವ ಭಯೋತ್ಪಾದಕ ಹತ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಹೆಚ್ಚಾಗಿದ್ದು, ಸೋಮವಾರ ಸೇನಾಪಡೆಯ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಹೆಚ್ಚಾಗಿದ್ದು, ಸೋಮವಾರ ಸೇನಾಪಡೆಯ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.
ರಾಜಧಾನಿ ಶ್ರೀನಗರದಿಂದ ಕೇವಲ 55 ಕಿಮೀ ದೂರದಲ್ಲಿರುವ ಲಾವ್ಡಾರಾ ಗ್ರಾಮದಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಉಗ್ರನನ್ನು ಹತ್ಯೆಗೈಯ್ಯಲಾಗಿದೆ.
ಈ ಗ್ರಾಮದಲ್ಲಿ ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಸೈನಿಕರನ್ನು ಕಂಡ ಉಗ್ರರು ಗುಂಡಿನ ಸುರಿಮಳೆ ಗರೆದಿದ್ದಾರೆ. ಇದಕ್ಕೆ ಸೇನೆ ಕೂಡ ಪ್ರತ್ಯುತ್ತರ ನೀಡುತ್ತಿದ್ದು, ಸೇನೆಯ ಗುಂಡಿಗೆ ಓರ್ವ ಉಗ್ರ ಹತನಾಗಿದ್ದಾನೆ. ಪ್ರದೇಶದಲ್ಲಿ ಮೂರಕ್ಕೂ ಹೆಚ್ಚು ಉಗ್ರರು ಇರುವ ಶಂಕೆ ಇದ್ದು ಕಾರ್ಯಾಚರಣೆ ಮುಂದುವರೆದಿದೆ.
ಇನ್ನು ಅವಿತಿರುವ ಉಗ್ರರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


