ಜೆಎನ್ ಯುವಿನಲ್ಲಿ ಶೈಕ್ಷಣಿಕ ತುರ್ತುಪರಿಸ್ಥಿತಿ: ವಿದ್ಯಾರ್ಥಿಗಳ ಆರೋಪ
ಜವಾಹರ್ ಲಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆಗೆ ಇಳಿದಿದ್ದು, ವಿಶ್ವವಿದ್ಯಾನಿಲಯದಲ್ಲಿ ಶೈಕ್ಷಣಿಕ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿರುವುದಾಗಿ ಆರೋಪಿಸಿದ್ದಾರೆ.

ಜವಾಹರ್ ಲಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆಗೆ ಇಳಿದಿದ್ದು, ವಿಶ್ವವಿದ್ಯಾನಿಲಯದಲ್ಲಿ ಶೈಕ್ಷಣಿಕ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿರುವುದಾಗಿ ಆರೋಪಿಸಿದ್ದಾರೆ.
ವಿಶ್ವವಿದ್ಯಾನಿಲಯದ ಉಪಕುಲಪತಿ ಎಂ.ಜಗದೀಶ್ ಕುಮಾರ್ ಅವರು ಪ್ರಜಾಪ್ರಭುತ್ವ ರೀತಿಯಲ್ಲಿ, ಅಥವಾ ಸಮಂಜಸವಾದ ರೀತಿಯಲ್ಲಿ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿಲ್ಲವಾದ್ದರಿಂದ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಶುಲ್ಕ ಹೆಚ್ಚಳ ಹಾಗೂ ಹೊಸ ಹಾಸ್ಟೆಲ್ ನಿಯಮಾವಳಿ ಪ್ರಸ್ತಾವವನ್ನು ವಿರೋಧಿಸಿ ಅಲ್ಲಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ತಮ್ಮ ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ.
ಶುಲ್ಕದಲ್ಲಿ ಹಿಂದಿನದ್ದಕ್ಕಿಂತ ಶೇ. 999ರಷ್ಟು ಹೆಚ್ಚಳವಾಗಿದೆ. ಜೆಎನ್ಯುನಲ್ಲಿರುವ ಶೇ. 40ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಿಂದ ಬಂದವರಾಗಿದ್ದಾರೆ, ಆದ್ದರಿಂದ ಶುಲ್ಕ ಹೆಚ್ಚಳವನ್ನು ಕೈಬಿಡಬೇಕೆಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ. ಇನ್ನು ಹಾಸ್ಟೆಲ್ ನಿಯಮಾವಳಿಗಳಲ್ಲಿ ನಿಷೇಧಾಜ್ಞೆ, ಸಮಯ ಮತ್ತು ವಸ್ತ್ರ ಸಂಹಿತೆ ಇತ್ಯಾದಿ ಹೊಸ ಅಂಶಗಳನ್ನು ಸೇರಿಸಲಾಗಿದೆ. ಈ ಬಗ್ಗೆ ಕುಲಪತಿಗಳೊಂದಿಗೆ ಮಾತನಾಡಬೇಕೆಂದರೆ ಅವರು ನಮ್ಮನ್ನು ಭೇಟಿಯಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


