ದೇಶ

ಮಹಾ ಸರ್ಕಾರ ರಚಿಸಲು ಶಿವಸೇನಾಗೆ ಬೆಂಬಲ ವಿಚಾರ: ಕಾಂಗ್ರೆಸ್ ನಲ್ಲಿ ಪರ, ವಿರೋಧ ಚರ್ಚೆ

ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಯ ಬಿಕ್ಕಟ್ಟು ಮುಂದುವರೆದಿದ್ದು, ಎನ್ ಡಿಎ ಮೈತ್ಕಿ ಕಡಿದುಕೊಳ್ಳಲು ಮುಂದಾಗಿರುವ ಶಿವಸೇನಾಗೆ ಬೆಂಬಲ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ....

ಮಹಾ ಸರ್ಕಾರ ರಚಿಸಲು ಶಿವಸೇನಾಗೆ ಬೆಂಬಲ ವಿಚಾರ: ಕಾಂಗ್ರೆಸ್ ನಲ್ಲಿ ಪರ, ವಿರೋಧ ಚರ್ಚೆ
ಸೋನಿಯಾ ಗಾಂಧಿ
Published On :

ಜೈಪುರ: ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಯ ಬಿಕ್ಕಟ್ಟು ಮುಂದುವರೆದಿದ್ದು, ಎನ್ ಡಿಎ ಮೈತ್ಕಿ ಕಡಿದುಕೊಳ್ಳಲು ಮುಂದಾಗಿರುವ ಶಿವಸೇನಾಗೆ ಬೆಂಬಲ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರಲ್ಲೇ ಪರ, ವಿರೋಧ ವ್ಯಕ್ತವಾಗುತ್ತಿದೆ.

ಬಿಜೆಪಿಯ ಕುದುರೆ ವ್ಯಾಪಾರದ ಭಯದಿಂದ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕರು ಹಾಗೂ ಹಿರಿಯ ನಾಯಕರು ಜೈಪುರದ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ಇಂದು ವಿಶೇಷ ವಿಮಾನದ ಮೂಲಕ ಕೆಲವು ಹಿರಿಯ ನಾಯಕರು ದೆಹಲಿಗೆ ತೆರಳಿದ್ದಾರೆ.

ಶಿವಸೇನಾಗೆ ಬೆಂಬಲ ನೀಡುವ ಈ ಕುರಿತು ಚರ್ಚಿಸಲು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕೋರ್ ಕಮಿಟಿ ಸಭೆ ಕರೆಯಲಾಗಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳ ಸಾಹೇಬ್ ತೊರಟ್ ಹಾಗೂ ಇತರೆ ಮೂವರು ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವಾಣ್, ಸುಶಿಲ್ ಸಿಂಧೆ ಮತ್ತು ಪೃಥ್ವಿರಾಜ್ ಚವಾಣ್ ಅವರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನಾಗೆ ಬೆಂಬಲ ನೀಡುವ ಕುರಿತು ಕಾಂಗ್ರೆಸ್ ಮುಖಂಡರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆದರೆ ಕೆಲವು ಶಿವಸೇನಾಗೆ ಬಂಬಲ ನೀಡಲು ಒಪ್ಪಿದರೆ ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಇದುವರೆಗೂ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಇಂದು ಸಂಜೆ ಕೋರ್ ಕಮಿಟಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಮಲ್ಲಿಕಾರ್ಜುನ್ ಖರ್ಗೆ ಅವರು, ಈ ಕಾಂಗ್ರೆಸ್-ಎನ್ ಸಿಪಿ ಮೈತ್ರಿಕೂಟಕ್ಕೆ ಜನರು ಪ್ರತಿಪಕ್ಷದಲ್ಲಿ ಕುಳಿತುಕೊಳ್ಳಲು ಜನಾದೇಶ ನೀಡಿದ್ದಾರೆ. ಆ ಕೆಲಸವನ್ನು ಪಕ್ಷ ಮಾಡಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.