'ಮಹಾ' ಬಿಕ್ಕಟ್ಟು: ವಿರೋಧ ಪಕ್ಷದಲ್ಲಿ ಕೂರುವುದೇ ನಮ್ಮ ತೀರ್ಮಾನ: ಮಲ್ಲಿಕಾರ್ಜುನ ಖರ್ಗೆ
ಮಹಾರಾಷ್ಟ್ರದಲ್ಲಿನ ಸರ್ಕಾರ ರಚನೆ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ತಾವು ವಿಪಕ್ಷ ಸ್ಥಾನದಲ್ಲಿ ಕೂರುವುದಾಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿನ ಸರ್ಕಾರ ರಚನೆ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ತಾವು ವಿಪಕ್ಷ ಸ್ಥಾನದಲ್ಲಿ ಕೂರುವುದಾಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ತೀರ್ಮಾನದಂತೆ ನಡೆದುಕೊಳ್ಳಲಿದ್ದೇವೆ. ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ನಮ್ಮ ಮುಂದಿನ ನಡೆಯ ಬಗ್ಗೆ ಚರ್ಚಿಸಲಾಗುವುದು ಹಾಗೂ ಹೈಕಮಾಂಡ್ ನೀಡುವ ಸೂಚನೆಗಳನ್ನು ಪಾಲಿಸಲಾಗುವುದು ಎಂದು ಹೇಳಿದ್ದಾರೆ.
ಜನರು ನೀಡಿದ ತೀರ್ಪಿನಂತೆ ಹಾಗೂ ನಮ್ಮ ಹೈಕಮಾಂಡ್ ನಿರ್ಧಾರದಂತೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವುದೇ ನಮ್ಮ ಸದ್ಯದ ತೀರ್ಮಾನವಾಗಿದೆ. ಮುಂದಿನ ತೀರ್ಮಾನ ಪಕ್ಷದ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಹೇಳಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದಿರಿವೆ. ಶಿವಸೇನಾವು ಎನ್‌ಸಿಪಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂಬ ಮಾತುಗಳು ಕೇಳಿಬಂದಿವೆ. ಈಗಾಗಲೇ ರಾಜ್ಯಪಾಲರು ಸರ್ಕಾರ ರಚನೆಗೆ ಶಿವಸೇನಾ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ.
Related Article
ಎನ್ ಡಿಎಗೆ ಶಿವಸೇನೆ ಗುಡ್ ಬೈ? ಕೇಂದ್ರ ಸಚಿವ ಸ್ಥಾನಕ್ಕೆ ಸಂಸದ ಅರವಿಂದ್ ಸಾವಂತ್ ರಾಜಿನಾಮೆ!
ಎನ್ ಡಿಎ ಮೈತ್ರಿಕೂಟ ತೊರೆಯಿರಿ: ಶಿವಸೇನೆಗೆ ಎನ್ ಸಿಪಿ ಷರತ್ತು!
ಶಿವಸೇನೆಗೆ ಬೆಂಬಲ ನೀಡಲು ಎನ್ ಸಿಪಿ ಹಾಕಿದ್ದು ಒಂದೇ ಒಂದು ಷರತ್ತು, ಅದು ಇಷ್ಟೆ....
ಸರ್ಕಾರ ರಚನೆ ರೇಸ್ ನಿಂದೆ ಹಿಂದೆ ಸರಿದ ಬಿಜೆಪಿ: ಶಿವಸೇನೆಗೆ ರಾಜ್ಯಪಾಲರ ಆಹ್ವಾನ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


