ಗಂದೇರ್‌ಬಾಲ್‌ನಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಗಂದೇರ್‌ಬಾಲ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಗಂದೇರ್‌ಬಾಲ್: ಜಮ್ಮು ಮತ್ತು ಕಾಶ್ಮೀರದ ಗಂದೇರ್‌ಬಾಲ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಹತ್ಯೆಯಾಗಿರುವ ಇಬ್ಬರು ಉಗ್ರರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ಹೇಳಲಾಗುತ್ತಿದೆ.
ಗಂದೇರ್‌ಬಾಲ್ ನಲ್ಲಿ ಉಗ್ರರು ಅಡಗಿ ಕುಳಿತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಬಳಿಕ ಕಾರ್ಯಾಚರಣೆಯನ್ನು ಭದ್ರತಾಪಡೆಗಳು ಎನ್'ಕೌಂಟರ್ ಆಗಿ ಪರಿವರ್ತಿಸಿ ಉಗ್ರರನ್ನು ಸದೆಬಡಿದೆದೆ.
ಸ್ಥಳದಲ್ಲಿ ಈಗಲೂ ಕಾರ್ಯಾಚರಣೆ ಮುಂದುವರೆದಿದ್ದು, ಈಗಾಗಲೂ ಸ್ಥಳದಲ್ಲಿ 2-3 ಉಗ್ರರಿರುವ ಶಂಕೆಗಳು ವ್ಯಕ್ತವಾಗಿದೆ. ಎನ್'ಕೌಂಟರ್ ಸ್ಧಳದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್'ಪಿಎಫ್ ಮತ್ತು ಸೇನಾಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


