'ಮಹಾ' ಕಗ್ಗಂಟು: ರಾಜ್ಯಪಾಲರ ತೀರ್ಮಾನ ಪ್ರಶ್ನಿಸಿ, ಸುಪ್ರೀಂ ಮೊರೆ ಹೋದ ಶಿವಸೇನೆ
ಮಹಾರಾಷ್ಟ್ರದಲ್ಲಿನ ರಾಜಕೀಯ ಕ್ಷಣ ಕ್ಷಣಕ್ಕೂ ರೋಚಕತೆ ಪಡೆದುಕೊಳ್ಳುತ್ತಿದೆ. ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಮುಂಬೈ: ಮಹಾರಾಷ್ಟ್ರದಲ್ಲಿನ ರಾಜಕೀಯ ಕ್ಷಣ ಕ್ಷಣಕ್ಕೂ ರೋಚಕತೆ ಪಡೆದುಕೊಳ್ಳುತ್ತಿದೆ. ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಸರ್ಕಾರ ರಚಿಸಲು ಬಿಜೆಪಿ ಎರಡು ದಿನ ಅವಕಾಶ ನೀಡಿದ್ದ ರಾಜ್ಯಪಾಲರು ಶಿವಸೇನೆಗೆ ಕೇವಲ 24 ಗಂಟೆಗಳ ಗಡುವು ನೀಡಿದ್ದರು. ಶಿವಸೇನಾ ಕೂಡಾ ಸರ್ಕಾರ ರಚಿಸುವಲ್ಲಿ ವಿಫಲವಾಗಿದ್ದರಿಂದ ಮೂರನೇ ದೊಡ್ಡ ಪಕ್ಷವಾಗಿರುವ ಎನ್ ಸಿಪಿಗೆ ಇಂದು ರಾತ್ರಿ 8-30ರವರೆಗೆ ಗಡುವನ್ನು ನೀಡಲಾಗಿದೆ. ಆದಾಗ್ಯೂ, ಈ ಗಡುವು ಮುಗಿಯದಿದ್ದರೂ ರಾಷ್ಟ್ರಪತಿ ಆಳ್ವಿಕೆಗೆ ರಾಜ್ಯಪಾಲರು ಮಾಡಿರುವ ಶಿಫಾರಸನ್ನು ಶಿವಸೇನೆ ಪ್ರಶ್ನಿಸಿದೆ.
ಕಾಂಗ್ರೆಸ್ ಮುಖಂಡ ಹಾಗೂ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಶಿವಸೇನೆ ಪರ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಮಧ್ಯೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ, ಸರ್ಕಾರ ರಚಿಸಲು ಶಿವಸೇನೆಗೆ 48 ಗಂಟೆಗಳ ಕಾಲಾವಕಾಶ ನೀಡದ ರಾಜ್ಯಪಾಲರು ಬಿಜೆಪಿಗೆ 5 ವಾರಗಳ ಕಾಲಾವಕಾಶ ನೀಡುತ್ತಾರೆ. ರಾಜಕೀಯ ದುರುದ್ದೇಶಕ್ಕಾಗಿ ಸಾಂವಿಧಾನಿಕ ಹುದ್ದೆಗಳನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


