ನೆಹರೂ ಜನ್ಮದಿನ: ದೇಶಾದ್ಯಂತ ಮಕ್ಕಳ ದಿನಾಚರಣೆ, ಗಣ್ಯರಿಂದ ಸ್ಮರಣೆ
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ ಪ್ರಯುಕ್ತ ದೇಶಾದ್ಯಂತ ಗುರುವಾರ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ನೆಹರೂ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ನವದೆಹಲಿ: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ ಪ್ರಯುಕ್ತ ದೇಶಾದ್ಯಂತ ಗುರುವಾರ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ನೆಹರೂ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯ ಶಾಂತಿವನಕ್ಕೆ ತೆರಳಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಪಂಡಿತ್ ನೆಹರೂ ಅವರ ಜಯಂತಿ ಸ್ಮರಣಾರ್ಥ ಶಾಂತಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರ್ ಲಾಲ್ ನೆಹರೂ ಅವರ ಜನ್ಮ ದಿನಾಚರಣೆಯಂದು ಅವರ ಸಾಧನೆಯನ್ನು ಸ್ಮರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನೆಹರು ಅವರ ಜನ್ಮದಿನಾಚರಣೆಯನ್ನು ನಾವು ದೇಶದ ಮೊದಲ ಪ್ರಧಾನಿ, ಅತ್ಯುತ್ತಮ ಆಡಳಿತಗಾರ, ದೂರದೃಷ್ಟಿತ್ವ ಹೊಂದಿದ್ದ ವ್ಯಕ್ತಿ, ವಿದ್ವಾಂಸ, ಸಾಂಸ್ಥಿಕ ನಿರ್ಮಾತೃ ಮತ್ತು ಆಧುನಿಕ ಭಾರತದ ಶಿಲ್ಪಿಯನ್ನು ಸ್ಮರಿಸಬೇಕು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


