ಸಿಜೆಐ ರಂಜನ್ ಗೊಗೊಯ್ ಗೆ ಹೃದಯ ಸ್ಪರ್ಶಿ ಬೀಳ್ಕೂಡುಗೆ
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಸೇವಾವಧಿ ಇಂದು ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಶುಕ್ರವಾರ ಹೃದಯ ಸ್ಪರ್ಶಿ ಬೀಳ್ಕೂಡುಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು

ನವದೆಹಲಿ:ಶತಮಾನಗಳಷ್ಟು ಹಳೆಯದಾದ ಅಯೋಧ್ಯೆ ವಿವಾದವನ್ನು ಇತ್ಯರ್ಥಗೊಳಿಸುವ ಮೂಲಕ ದೇಶಾದ್ಯಂತ ಭಾರಿ ಜನಮನ್ನಣೆ ಗಳಿಸಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಸೇವಾವಧಿ ಇಂದು ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಶುಕ್ರವಾರ ಹೃದಯ ಸ್ಪರ್ಶಿ ಬೀಳ್ಕೂಡುಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇತರೆ ಹಿರಿಯ ನ್ಯಾಯಮೂರ್ತಿಗಳು, ಹಿರಿಯ ಅಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷರು ಹಾಗೂ ನೂರಾರು ವಕೀಲರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರಂಜನ್ ಗೊಗೊಯ್ ಅವರೊಂದಿನ ಒಡನಾಟದ ಬಗ್ಗೆ ಅನಿಸಿಕೆ ಹಂಚಿಕೊಡರು.
ಶಬರಿಮಲೆ, ಆರ್ ಟಿಐ, ರಫೇಲ್ ಸೇರಿದಂತೆ ಹಲವು ಪ್ರಕರಣಗಳ ಮಹತ್ವದ ತೀರ್ಪಿನ ಹಿನ್ನೆಲೆಯಲ್ಲಿ ರಂಜನ್ ಗೊಗೊಯ್ ಅವರನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.
ನಾಳೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅಧಿಕಾರ ಸ್ವೀಕರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


