ಐಎನ್ಎಕ್ಸ್ ಮೀಡಿಯಾ ಪ್ರಕರಣ: ದೆಹಲಿ ಹೈಕೋರ್ಟ್ ನಲ್ಲಿ ಚಿದಂಬರಂಗೆ ಜಾಮೀನು ನಕಾರ
ಇಡಿ ದಾಖಲಿಸಿದ್ದ ಐಎನ್ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಶುಕ್ರವಾರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಜಾಮೀನು ನಿರಾಕರಿಸಿದೆ, ಚಿದಂಬರಂ ಅವರ ವಿರುದ್ಧ ಪ್ರಾಥಮಿಕ ಆರೋಪಗಳು ಸ್ವಭಾವತಃ ಗಂಭೀರವಾಗಿದೆ ಮತ್ತು ಅವರು ಅಪರಾಧದಲ್ಲಿ ಸಕ್ರಿಯ ಮತ್ತು ಪ್ರಮುಖ ಪಾತ್ರ ವಹಿಸಿದ್ದಾರೆ, ಅವರಿಗೆ ಜಾಮೀನು ಕೊಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದ

ನವದೆಹಲಿ: ಇಡಿ ದಾಖಲಿಸಿದ್ದ ಐಎನ್ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಶುಕ್ರವಾರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಜಾಮೀನು ನಿರಾಕರಿಸಿದೆ, ಚಿದಂಬರಂ ಅವರ ವಿರುದ್ಧ ಪ್ರಾಥಮಿಕ ಆರೋಪಗಳು ಸ್ವಭಾವತಃ ಗಂಭೀರವಾಗಿದೆ ಮತ್ತು ಅವರು ಅಪರಾಧದಲ್ಲಿ ಸಕ್ರಿಯ ಮತ್ತು ಪ್ರಮುಖ ಪಾತ್ರ ವಹಿಸಿದ್ದಾರೆ, ಅವರಿಗೆ ಜಾಮೀನು ಕೊಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಈ ಪ್ರಕರಣದಲ್ಲಿ ಚಿದಂಬರಂಗೆ ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ನ್ಯಾಯಮೂರ್ತಿ ಸುರೇಶ್ ಕೈಟ್ ಹೇಳಿದರು. "ನಾನು ಜಾಮೀನು ನೀಡಲು ಒಲವು ತೋರುತ್ತಿಲ್ಲ" ಎಂದು ನ್ಯಾಯಮೂರ್ತಿ ಕೈಟ್ ಹೇಳಿದರು. ತೀರ್ಪನ್ನು ಉಚ್ಚರಿಸುವಾಗ, ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಸಂಗ್ರಹಿಸಿದ ದಾಖಲೆಗಳು ಮುಖ್ಯವಾಗಿದೆ. ಇದಕ್ಕೆ ಹಿಂದೆ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸಂಗ್ರಹಿಸಿದ ವಸ್ತುಗಳಿಗಿಂತ ಭಿನ್ನವಾಗಿದೆ. ಈ ಪ್ರಕರಣದಲ್ಲಿ ನಡೆಸಿದ ತನಿಖೆಯು ಸಿಬಿಐ ಪ್ರಕರಣಕ್ಕಿಂತ ಭಿನ್ನವಾಗಿದೆ ಎಂದು ನ್ಯಾಯಾಲಯ ಹೇಳಿದೆ,
ನವೆಂಬರ್ 8 ರಂದು ಚಿದಂಬರಂ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಪರ ವಕೀಲರ ವಾದಗಳನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿತ್ತು
ಅಕ್ಟೋಬರ್ 16 ರಂದು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಚಿದಂಬರಂ ಬಂಧಿಸಲ್ಪಟ್ಟಿದ್ದರು. ಪ್ರಸ್ತುತ ಅವರು ವಿಚಾರಣಾ ನ್ಯಾಯಾಲಯದ ಆದೇಶದ ಮೇರೆಗೆ ನವೆಂಬರ್ 27 ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಆಗಸ್ಟ್ 21 ರಂದು ಚಿದಂಬರಂ ಅವರನ್ನು ಸಿಬಿಐ ಬಂಧಿಸಿತ್ತು ಮತ್ತು ಅಕ್ಟೋಬರ್ 22 ರಂದು ಸುಪ್ರೀಂ ಕೋರ್ಟ್ ಆ ಪ್ರಕರಣದಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


