ದೇಶ

ರಿಮ್ಸ್ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್‍ ಭೇಟಿ ಮಾಡಿದ ಶರದ್ ಯಾದವ್ :ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ

ಹಿರಿಯ ಮುಖಂಡ ಶರದ್ ಯಾದವ್ ಅವರು ಜೈಲು ಶಿಕ್ಷೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನು ಶನಿವಾರ ಇಲ್ಲಿನ ರಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.

ರಿಮ್ಸ್ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್‍ ಭೇಟಿ ಮಾಡಿದ ಶರದ್ ಯಾದವ್ :ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ
ರಿಮ್ಸ್ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್‍ ಭೇಟಿ ಮಾಡಿದ ಶರದ್ ಯಾದವ್ :ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ
Published On :

ರಾಂಚಿ: ಹಿರಿಯ ಮುಖಂಡ ಶರದ್ ಯಾದವ್ ಅವರು ಜೈಲು ಶಿಕ್ಷೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನು ಶನಿವಾರ ಇಲ್ಲಿನ ರಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ಕುರಿತು ಉಭಯ ನಾಯಕರ ನಡುವೆ ಚರ್ಚೆ ನಡೆಯಿತು. ಲಾಲು ಯಾದವ್ ಅವರನ್ನು ಭೇಟಿಯಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರದ್ ಯಾದವ್, ಜಾರ್ಖಂಡ್ ನಲ್ಲಿ ಸರ್ಕಾರದ ನೆರಳಿನಲ್ಲಿ ದೊಡ್ಡ ಪ್ರಮಾಣದಲ್ಲಿ ಖನಿಜ ಸಂಪತ್ತನ್ನು ಲೂಟಿ ಮಾಡಲಾಗುತ್ತಿದೆ. ಕೈಗಾರಿಕೆಗಳು ಸ್ಥಗಿತಗೊಂಡಿದ್ದು, ರೈತರು ಸಂಕಷ್ಟ ಸ್ಥಿತಿಗೆ ತಲುಪಿದ್ದಾರೆ ಎಂದರು.

ಜಾರ್ಖಂಡ್ ರಾಜ್ಯದ ಸ್ಥಿತಿ ಕರುಣಾಜನಕವಾಗಿದೆ. ಕಳೆದ ಹಲವು ದಶಕಗಳಲ್ಲಿ ಈ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ ಎಂದು ಶರದ್ ಯಾದವ್ ಹೇಳಿದ್ದಾರೆ. ಎನ್ ಡಿಎ ವಿಭಜನೆಯ ಬಗ್ಗೆ ಮಾತನಾಡಿದ ಅವರು, ವದಂತಿಗಳನ್ನು ಹರಡುವಲ್ಲಿ ಎನ್ ಡಿಎ ಜನರು ಚಾಣಾಕ್ಷರಾಗಿದ್ದಾರೆ. ಜಾರ್ಖಂಡ್ ನ ಜನರು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡಿದರು. ಆದರೆ ದುರದೃಷ್ಟವಶಾತ್ ಹೊರಗಿನವರನ್ನು ಮುಖ್ಯಮಂತ್ರಿಯಾಗಿ ಪಡೆದರು ಎಂದು ಹೇಳಿದರು. ಆರ್ ಜೆಡಿ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ಶರದ್ ಯಾದವ್ ಸ್ಥಾನ ಪಡೆದಿದ್ದಾರೆ. ಯಾದವ್ ಅವರಲ್ಲದೆ ಹಿರಿಯ ಆರ್ ಜೆಡಿ ನಾಯಕ ರಾಮ್ ಬಾಬು ಯಾದವ್ ಮತ್ತು ಬಿಸ್ಕೊಮನ್ ಅಧ್ಯಕ್ಷ ಸುನಿಲ್ ಸಿಂಗ್ ಸಹ ಯಾದವ್ ಅವರನ್ನು ಭೇಟಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.