ಸಿಯಾಚಿನ್ ನಲ್ಲಿ ಭಾರಿ ಹಿಮಪಾತ: ಹಿಮದಡಿಯಲ್ಲಿ ಸಿಲುಕಿದ 8 ಸೈನಿಕರು
ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್ ನಲ್ಲಿ ಸೇನಾ ಶಿಬಿರದ ಮೇಲೆ ಭಾರೀ ಹಿಮಪಾತವಾಗಿದ್ದು, 8 ಸೈನಿಕರು ಕಣ್ಮರೆಯಾಗಿರುವ ಸಂಗತಿ ತಿಳಿದುಬಂದಿದೆ.

ನವದೆಹಲಿ: ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್ ನಲ್ಲಿ ಸೇನಾ ಶಿಬಿರದ ಮೇಲೆ ಭಾರೀ ಹಿಮಪಾತವಾಗಿದ್ದು, 8 ಸೈನಿಕರು ಕಣ್ಮರೆಯಾಗಿರುವ ಸಂಗತಿ ತಿಳಿದುಬಂದಿದೆ.
ಸಿಯಾಚಿನ್ ಪ್ರದೇಶದಲ್ಲಿ ಗಸ್ತು ತಿರುಗುತ್ತದ್ದ 8 ಮಂದಿ ಸೈನಿಕರು ನಾಪತ್ತೆಯಾಗಿದ್ದಾರೆ. ಭಾರಿ ಹಿಮಪಾತದಲ್ಲಿ ಅವರು ಸಿಲುಕಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
18 ಸಾವಿರ ಅಡಿ ಎತ್ತರದ ಪ್ರದೇಶದಲ್ಲಿ ಹಿಮಪಾತವಾಗಿದೆ. ಇದರಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಹಿನ್ನಡೆಯಾಗಿದೆ. ನಾಪತ್ತೆಯಾದ ಸೈನಿಕರಿಗಾಗಿ ಹುಡುಕಾಟ ತೀವ್ರಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಹಿಮಾಲಯದ ಉತ್ತರ ತುದಿಯಲ್ಲಿ ಲಡಾಕ್ ವ್ಯಾಪ್ತಿಯಲ್ಲಿರುವ ಈ ಪ್ರದೇಶ ಸಮುದ್ರ ಮಟ್ಟದಿಂದ ಸುಮಾರು 22 ಸಾವಿರ ಅಡಿ ಎತ್ತರದಲ್ಲಿದ್ದು, 1984ರಿಂದ ಈವರೆಗೂ ಭಾರತ ಮತ್ತು ಪಾಕಿಸ್ತಾನದ ಅನೇಕ ಯೋಧರನ್ನು ಹಿಮಪಾತ ಬಲಿತೆಗೆದುಕೊಂಡಿದೆ.
2016ರಲ್ಲಿ ಸಂಭವಿಸಿದ್ದ ಹಿಮಪಾತದಲ್ಲಿ 10 ಜನ ಯೋಧರು ಮೃತಪಟ್ಟಿದ್ದರು. 25 ಅಡಿ ಆಳದಲ್ಲಿ ಹಿಮದಡಿ ಸಿಲುಕಿದ್ದ ಕರ್ನಾಟಕದ ಯೋಧ ಹನುಮಂತಪ್ಪ ಕೊಪ್ಪದ ಅವರನ್ನು ಆರು ದಿನಗಳ ಬಳಿಕ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿತ್ತು. ಆದರೆ, ಅವರು ಬಳಿಕ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


