ಮಹಾರಾಷ್ಟ್ರದಲ್ಲಿ ಶೀಘ್ರದಲ್ಲಿ ಸುಭದ್ರ ಸರ್ಕಾರ ರಚನೆ- ಎನ್ ಸಿಪಿ ಜೊತೆ ಸಭೆ ಬಳಿಕ ಕಾಂಗ್ರೆಸ್ ವಿಶ್ವಾಸ
ಅಂತೂ ಇಂತೂ ಶಿವಸೇನೆ ಜೊತೆಗೆ ಕೈ ಜೋಡಿಸುವ ಸುಳಿವನ್ನು ನೀಡಿರುವ ಕಾಂಗ್ರೆಸ್ ನಾಯಕರು ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಸುಭದ್ರ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಅಂತೂ ಇಂತೂ ಶಿವಸೇನೆ ಜೊತೆಗೆ ಕೈ ಜೋಡಿಸುವ ಸುಳಿವನ್ನು ನೀಡಿರುವ ಕಾಂಗ್ರೆಸ್ ನಾಯಕರು ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಸುಭದ್ರ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶರದ್ ಪವಾರ್ ನಿವಾಸದಲ್ಲಿ ನಡೆದ ಎನ್ ಸಿಪಿ ಹಾಗೂ ಕಾಂಗ್ರೆಸ್ ನಾಯಕರ ಸರಣಿ ಸಭೆ ಬಳಿಕ ಮಾತನಾಡಿದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹ್ಹಾಣ್, ಮೈತ್ರಿ ಏರ್ಪಡುವ ವಿಶ್ವಾಸವಿದ್ದು, ಮಹಾರಾಷ್ಟ್ರದಲ್ಲಿನ ರಾಜಕೀಯ ಅನಿಶ್ಚತತೆ ಕೊನೆಯಾಗಲಿದೆ. ಸುಭದ್ರ ಸರ್ಕಾರ ರಚನೆಯತ್ತ ನಾಯಕರು ಕಾರ್ಯೋನ್ಮುಖರಾಗಿರುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎನ್ ಸಿಪಿ ವಕ್ತಾರ ನವಾಜ್ ಮಲಿಕ್, ಎನ್ ಸಿಪಿ ಹಾಗೂ ಕಾಂಗ್ರೆಸ್ ಶಿವಸೇನೆ ಜೊತೆಗೆ ಕೈ ಜೋಡಿಸಲಿದ್ದು, ಮೂರು ಪಕ್ಷಗಳು ಒಗ್ಗೂಡಿ ಸರ್ಕಾರ ರಚಿಸುವುದು ಖಚಿತ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


