ಐಎನ್ಎಕ್ಸ್ ಮೀಡಿಯಾ ಹಗರಣ: ತಿಹಾರ್ ಜೈಲಿನಲ್ಲಿ ಚಿದಂಬರಂ ವಿಚಾರಣೆಗೆ ದೆಹಲಿ ಕೋರ್ಟ್ ಅಸ್ತು
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ವಿತ್ತ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿಯೇ ವಿಚಾರಣೆಗೆ ಒಳಪಡಿಸಲು ದೆಹಲಿ ಕೋರ್ಟ್ ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಅನುಮತಿ ನೀಡಿದೆ.

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ವಿತ್ತ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿಯೇ ವಿಚಾರಣೆಗೆ ಒಳಪಡಿಸಲು ದೆಹಲಿ ಕೋರ್ಟ್ ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಅನುಮತಿ ನೀಡಿದೆ.
ಪಿ ಚಿದಂಬರಂ ಅವರನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಲು ಅನುಮತಿ ಕೋರಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು, ನವೆಂಬರ್ 22 ಮತ್ತು 23ರಂದು ತಿಹಾರ್ ಜೈಲಿನಲ್ಲಿಯೇ ಆರೋಪಿಯ ವಿಚಾರಣೆ ನಡೆಸಲು ಅನುಮತಿ ನೀಡಿದ್ದಾರೆ.
ಇದಕ್ಕು ಮುನ್ನ ಕೋರ್ಟ್ ಚಿದಂಬರಂ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 27ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು.
ಇದೇ ಪ್ರಕರಣದಲ್ಲಿ ಚಿದಂಬರಂ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಇದನ್ನು ಪ್ರಶ್ನೆ ಮಾಡಿ ಜಾಮೀನು ಕೊಡುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯಕ್ಕೆ ಪ್ರತಿಕ್ರಿಯೆ ಸಲ್ಲಿಸುವಂತೆ ನೊಟೀಸ್ ಜಾರಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


