ದೇಶ

ಭಯೋತ್ಪಾದನೆ ಆರೋಪ ಹೊತ್ತವರಿಗೆ ರಕ್ಷಣಾ ಸಮಿತಿಯಲ್ಲಿ ಸ್ಥಾನ ನೀಡಿರುವುದು ದುರಾದೃಷ್ಟಕರ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ ಮಲೆಗಾಂವ್ ಸ್ಫೋಟದ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುರುವಾರ ತೀವ್ರವಾಗಿ ಕಿಡಿಕಾರಿದೆ. ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ ಮಲೆಗಾಂವ್ ಸ್ಫ

ಭಯೋತ್ಪಾದನೆ ಆರೋಪ ಹೊತ್ತವರಿಗೆ ರಕ್ಷಣಾ ಸಮಿತಿಯಲ್ಲಿ ಸ್ಥಾನ ನೀಡಿರುವುದು ದುರಾದೃಷ್ಟಕರ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ
ಪ್ರಜ್ಞಾ ಠಾಕೂರ್
Published On :

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ ಮಲೆಗಾಂವ್ ಸ್ಫೋಟದ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುರುವಾರ ತೀವ್ರವಾಗಿ ಕಿಡಿಕಾರಿದೆ. 

21 ಸದಸ್ಯರನ್ನು ಹೊಂದಿರುವ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನೇತೃತ್ವ ವಹಿಸಿದ್ದು, ಈ ಸಮಿತಿಯಲ್ಲಿ ಪ್ರಜ್ಞಾ ಠಾಕೂರ್ ಕೂಡ ಇದೀಗ ಒಬ್ಬರಾಗಿದ್ದಾರೆ. 

ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ ಹರಿಹಾಯ್ದಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಭಯೋತ್ಪಾದನೆ ಆರೋಪ ಹೊತ್ತಿರುವವರನ್ನು ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸಮಿತಿಯಲ್ಲಿ ಸದಸ್ಯತ್ವ ಸ್ಥಾನ ನೀಡಿರುವುದು ದೇಶದ ದುರಾದೃಷ್ಟಕರ ಸಂಗತಿ. ಹೃದಯದಿಂದ ಪ್ರಜ್ಞಾ ಠಾಕೂರ್ ಅವರನ್ನು ಕ್ಷಮಿಸದ ಮೋದಿಯವರು, ದೇಶದ ಅತ್ಯಂತ ಪ್ರಮುಖ ಇಲಾಖೆಯಾಗಿರುವ ರಕ್ಷಣಾ ಸಮಿತಿಯಲ್ಲಿ ಸ್ಥಾನ ನೀಡಿದ್ದಾರೆ. ಇದಕ್ಕೆ ಹೇಳುವುದು, ಮೋದಿ ಇದ್ದರೆ, ಎಲ್ಲವೂ ಸಾಧ್ಯ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.