ಮಹಾರಾಷ್ಟ್ರ ಬಿಕ್ಕಟ್ಟಿಗೆ ಬಿಜೆಪಿಯೇ ಕಾರಣ: ಉದ್ಧವ್ ಠಾಕ್ರೆ
ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯೇ ನೇರ ಕಾರಣ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಆರೋಪಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯೇ ನೇರ ಕಾರಣ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಆರೋಪಿಸಿದ್ದಾರೆ.
ಇಂದು ಮಾತೋಶ್ರೀಯಲ್ಲಿ ನಡೆದ ಸಭೆಯಲ್ಲಿ ಶಿವಸೇನಾ ಶಾಸಕರು ಉದ್ಧವ್ ಠಾಕ್ರೆ ಅವರ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥ, ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯೇ ಕಾರಣ. ವಿಧಾನಸಭೆ ಚುನಾವಣೆ ಬಳಿಕ ಸರ್ಕಾರ ರಚನೆಗೆ ಸಂಬಂಧಿಸಿದಂತೆ ದೇವೇಂದ್ರ ಫಡ್ನವಿಸ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರಿಂದ ನನಗೆ ಒಂದೇ ಒಂದು ಫೋನ್ ಕಾಲ್ ಸಹ ಬಂದಿಲ್ಲ ಎಂದು ಶಾಸಕರಿಗೆ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಕುರಿತು ಉದ್ಧವ್ ಠಾಕ್ರೆ ಅವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಮುಂದಿನ ಎರಡ್ಮೂರು ದಿನದಲ್ಲಿ ಅವರೇ ಸಿಎಂ ಹುದ್ದೆ ಕುರಿತು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಶಿವಸೇನಾ ಮುಖ್ಯ ಸಚೇತಕ ಸುನಿಲ್ ಪ್ರಭು ಅವರು ಹೇಳಿದ್ದಾರೆ.
ಪಕ್ಷದ ಎಲ್ಲಾ ಶಾಸಕರಿಗೆ ಮುಂಬೈನಲ್ಲಿ ಒಟ್ಟಾಗಿ ಇರುವಂತೆ ಸೂಚಿಸಲಾಗಿದೆ ಎಂದು ಪ್ರಭು ತಿಳಿಸಿದ್ದಾರೆ.
ಇದಕ್ಕು ಮುನ್ನ ಶಿವಸೇನಾ ಶಾಸಕರನ್ನು ಜೈಪುರಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಅದನ್ನು ತಳ್ಳಿಹಾಕಿರುವ ಪ್ರಭು ಅವರು, ನಮ್ಮ ಎಲ್ಲಿಗೂ ಹೋಗುವುದಿಲ್ಲ. ಇಲ್ಲೇ ಒಟ್ಟಿಗೆ ಇರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


