'ಮಹಾ'ರಾಷ್ಟ್ರ ಸರ್ಕಾರ ರಚನೆ ಕಸರತ್ತು: ಮಧ್ಯರಾತ್ರಿಯಲ್ಲಿ ಶಿವಸೇನೆ-ಎನ್ ಸಿಪಿ ನಾಯಕರ ಭೇಟಿ; ತೀವ್ರ ಚರ್ಚೆ
ಮಹಾರಾಷ್ಟ್ರ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಕಳೆದ ರಾತ್ರಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಕಳೆದ ರಾತ್ರಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಪವಾರ್ ಅವರ ನಿವಾಸದಲ್ಲಿ ಒಂದು ಗಂಟೆಗೂ ಅಧಿಕ ಸಮಯ ನಡೆದ ಮಾತುಕತೆಯಲ್ಲಿ ಎನ್ ಸಿಪಿ ಮತ್ತು ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸುವ ಪ್ರಯತ್ನವನ್ನು ಶಿವಸೇನೆ ನಾಯಕರು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ನಿನ್ನೆ ಶರದ್ ಪವಾರ್ ಅವರು ದೆಹಲಿಯಿಂದ ಆಗಮಿಸಿದ್ದರು. ಈ ಸಭೆಯ ವೇಳೆ ಸಂಜಯ್ ರಾವತ್ ಕೂಡ ಇದ್ದರು.ಆದರೆ ಕಾಂಗ್ರೆಸ್ ನ ಯಾವುದೇ ನಾಯಕರು ಇರಲಿಲ್ಲ. ಇದು ಉನ್ನತ ಮಟ್ಟದ ನಾಯಕರ ನಡುವಿನ ಮಾತುಕತೆಯಾಗಿದ್ದರಿಂದ ಅವರಿಗೆ ಮಾತ್ರ ಏನು ಮಾತುಕತೆ ನಡೆಯಿತು ಎಂದು ಗೊತ್ತಿದೆಯಷ್ಟೆ. ಸರ್ಕಾರ ರಚನೆ ಮಾಡಿ ಸ್ಥಾನಗಳ ಹಂಚಿಕೆ ಸಂಬಂಧ ಅಂತಿಮ ಘಟ್ಟದ ಮಾತುಕತೆ ನಡೆಸುವ ಸಂಬಂಧ ಈ ಮಾತುಕತೆಯಾಗಿರಬಹುದು ಎಂದು ಎನ್ ಸಿಪಿ ನಾಯಕರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


