3 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರಯಾಣ ವೆಚ್ಚ 255 ಕೋಟಿ ರೂ.!
ಕಳೆದ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರಯಾಣಗಳಿಗಾಗಿ ಸುಮಾರು 255 ಕೋಟಿ ರೂ ವೆಚ್ಚಮಾಡಲಾಗಿದೆ ಎಂದು ಸರ್ಕಾರ ರಾಜ್ಯ ಸಭೆಗೆ ತಿಳಿಸಿದೆ.

ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರಯಾಣಗಳಿಗಾಗಿ ಸುಮಾರು 255 ಕೋಟಿ ರೂ ವೆಚ್ಚಮಾಡಲಾಗಿದೆ ಎಂದು ಸರ್ಕಾರ ರಾಜ್ಯ ಸಭೆಗೆ ತಿಳಿಸಿದೆ.
2016-19ರ ನಡುವೆ ಪ್ರಧಾನಿ ಮೋದಿ ಅವರು ವಿದೇಶ ಪ್ರವಾಸಗಳಿಗೆ ಬಳಸಲಾಗಿರುವ ಚಾರ್ಟರ್ ವಿಮಾನಗಳಿಗಾಗಿ 255 ಕೋಟಿ ರೂ. ವೆಚ್ಚವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ. ಮುರಳೀಧರನ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
2016-17 ಸಾಲಿನಲ್ಲಿ 76.27 ಕೋಟಿ ರೂ 2017-18ರಲ್ಲಿ .99.32 ಕೋಟಿರೂ ಹಾಗೂ 2018-19ರಲ್ಲಿ ಈವರೆಗೆ 79.91 ಕೋಟಿ ರೂ. ಪ್ರಧಾನಿ ಅವರ ವಿದೇಶಿ ಪ್ರಯಾಣಕ್ಕೆ ವೆಚ್ಚವಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


