ಭೀಕರ ದೃಶ್ಯ: ಮೇಲು ಸೇತುವೆಯಿಂದ 50 ಅಡಿ ಕೆಳಕ್ಕೆ ಜನರ ಮೇಲೆ ಬಿದ್ದ ಕಾರು, ಭಯಾನಕ ವಿಡಿಯೋ!
ಮೇಲು ಸೇತುವೆ ಮೇಲೆ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕೆಳಗೆ ಜನರ ಮೇಲೆ ಬಿದ್ದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೈದರಾಬಾದ್: ಮೇಲು ಸೇತುವೆ ಮೇಲೆ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕೆಳಗೆ ಜನರ ಮೇಲೆ ಬಿದ್ದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೈದರಾಬಾದ್ ನ ಬಯೋ ಡೈವರ್ಸಿಟಿ ಜಂಕ್ಷನ್ ಬಳಿಕ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾರು ಮೇಲು ಸೇತುವೆಯಿಂದ ಕೆಳಗೆ ಬೀಳುವಾಗ ಮರದ ಮೇಲೆ ಬಿದ್ದಿದ್ದರಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಲು ಸಾಧ್ಯವಾಗಿದೆ. ಅದೃಷ್ಟವಶಾ ರಸ್ತೆ ಪಕ್ಕದಲ್ಲಿ ಬಸ್ ಗಾಗಿ ಜನರು ಕಾಯುತ್ತಿದ್ದರು. ಅವರ ಮೇಲೆ ಕಾರು ಬಿದ್ದಿದ್ದರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇತ್ತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


