ದೇಶ

ನನಗೆ ಶರದ್‌ ಪವಾರ್ ನಾಯಕ, ಎನ್‌ಸಿಪಿಯಲ್ಲೇ ಇರುತ್ತೇನೆ: ಉಲ್ಟಾ ಹೊಡೆದ ಅಜಿತ್ ಪವಾರ್

ಎನ್‌ಸಿಪಿ ವರಿಷ್ಠ ಶರದ್‌ ಪವಾರ್ ತಮಗೆ ಎಂದೂ ನಾಯಕರಾಗಿದ್ದು, ಎನ್‌ಸಿಪಿಯಲ್ಲೇ ಇರುತ್ತೇನೆ ಎಂದು ಎನ್‌ಸಿಪಿ ಬಂಡಾಯ ನಾಯಕ ಹಾಗೂ ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರು ಅಜಿತ್‌ ಪವಾರ್ ಹೇಳಿದ್ದಾರೆ.

ನನಗೆ ಶರದ್‌ ಪವಾರ್ ನಾಯಕ, ಎನ್‌ಸಿಪಿಯಲ್ಲೇ ಇರುತ್ತೇನೆ: ಉಲ್ಟಾ ಹೊಡೆದ ಅಜಿತ್ ಪವಾರ್
ಅಜಿತ್ ಪವಾರ್
Published On :

ಮುಂಬೈ: ಎನ್‌ಸಿಪಿ ವರಿಷ್ಠ ಶರದ್‌ ಪವಾರ್ ತಮಗೆ ಎಂದೂ ನಾಯಕರಾಗಿದ್ದು, ಎನ್‌ಸಿಪಿಯಲ್ಲೇ ಇರುತ್ತೇನೆ ಎಂದು ಎನ್‌ಸಿಪಿ ಬಂಡಾಯ ನಾಯಕ ಹಾಗೂ ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರು ಅಜಿತ್‌ ಪವಾರ್ ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿಯ ದೇವೇಂದ್ರ ಫಡ್ನವಿಸ್‌ ಅವರೊಂದಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಅಜಿತ್ ಪವಾರ್ ಸರಣಿ ಟ್ವೀಟ್ ಮಾಡಿ, ಶರದ್‌  ಪವಾರ್ ಎಂದಿಗೂ ತಮ್ಮ ನಾಯಕರಾಗಿರುತ್ತಾರೆ. ತಾವು ಎನ್‌ಸಿಪಿಯಲ್ಲೇ ಇರುವುದಾಗಿ ಹೇಳಿದ್ದಾರೆ. 

ಬಿಜೆಪಿಗೆ ಬೆಂಬಲ ನೀಡಿರುವ ಕುರಿತು ಸಮರ್ಥಿಸಿಕೊಂಡಿರುವ ಅವರು, ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ಸ್ಥಾಪನೆ ಅಗತ್ಯವಿರುವುದರಿಂದ  ಬಿಜೆಪಿಗೆ ಬೆಂಬಲ ನೀಡಿದ್ದೇನೆ. ಮುಂದಿನ ಐದು ವರ್ಷ ಮೈತ್ರಿ ಸರ್ಕಾರ ಪ್ರಾಮಾಣಿಕವಾಗಿ ಬಡವರ, ರೈತರ, ಹಿಂದುಳಿದವರ ಮತ್ತು ಇಡೀ ಮಹಾರಾಷ್ಟ್ರ ಅಭಿವೃದ್ಧಿ ಪರವಾಗಿ ಕೆಲಸ ಮಾಡಲಿದೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.