ದೇಶ

ಸಂವಿಧಾನದ ಪಾವಿತ್ರ್ಯತೆ ಕಾಪಾಡಿ: ಪ್ರತಿಪಕ್ಷಗಳ ಪ್ರತಿಭಟನೆ, ಸಂವಿಧಾನ ದಿನಾಚರಣೆಗೆ ಬಹಿಷ್ಕಾರ 

ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಏರ್ಪಡಿಸಿದ್ದ 70ನೇ ಸಂವಿಧಾನ ದಿನ ಕಾರ್ಯಕ್ರಮವನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಬಹಿಷ್ಕರಿಸಿವೆ.

ಸಂವಿಧಾನದ ಪಾವಿತ್ರ್ಯತೆ ಕಾಪಾಡಿ: ಪ್ರತಿಪಕ್ಷಗಳ ಪ್ರತಿಭಟನೆ, ಸಂವಿಧಾನ ದಿನಾಚರಣೆಗೆ ಬಹಿಷ್ಕಾರ 
ಸಂಸತ್ತು ಆವರಣದ ಹೊರಗೆ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ
Published On :

ನವದೆಹಲಿ: ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಏರ್ಪಡಿಸಿದ್ದ 70ನೇ ಸಂವಿಧಾನ ದಿನ ಕಾರ್ಯಕ್ರಮವನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಬಹಿಷ್ಕರಿಸಿವೆ.


ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ವಿರೋಧ ಪಕ್ಷಗಳ ಸದಸ್ಯರು ಸಂಸತ್‌ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.


ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ, ಆನಂದ್ ಶರ್ಮಾ, ಟಿಎಂಸಿ ಸಂಸದರು ಹಾಗೂ ಇತರ ಪಕ್ಷಗಳ ಸಂಸದರು ಅಂಬೇಡ್ಕರ್ ಪ್ರತಿಮೆ ಬಳಿ ನಿಂತು " ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಿಸಿ" ಎಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.