ದೇಶ

ರಾಜ್ಯಪಾಲರನ್ನು ಭೇಟಿ ಮಾಡಿದ ಉದ್ಧವ್ ಠಾಕ್ರೆ: ನಾಳೆ ಮುಖ್ಯಮಂತ್ರಿಯಾಗಿ ಪದವಿ ಸ್ವೀಕಾರ 

ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮುಖ್ಯಸ್ಥನಾಗಿ ಆಯ್ಕೆಯಾಗಿರುವ ಉದ್ಧವ್ ಠಾಕ್ರೆ ಬುಧವಾರ ಬೆಳಗ್ಗೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.

ರಾಜ್ಯಪಾಲರನ್ನು ಭೇಟಿ ಮಾಡಿದ ಉದ್ಧವ್ ಠಾಕ್ರೆ: ನಾಳೆ ಮುಖ್ಯಮಂತ್ರಿಯಾಗಿ ಪದವಿ ಸ್ವೀಕಾರ 
ರಾಜ್ಯಪಾಲರನ್ನು ಭೇಟಿ ಮಾಡಿದ ಉದ್ಧವ್ ಠಾಕ್ರೆ ದಂಪತಿ
Published On :

ಮುಂಬೈ: ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮುಖ್ಯಸ್ಥನಾಗಿ ಆಯ್ಕೆಯಾಗಿರುವ ಉದ್ಧವ್ ಠಾಕ್ರೆ ಬುಧವಾರ ಬೆಳಗ್ಗೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.


ಇಂದು ವಿಧಾನಸಭೆಯ ಚುನಾಯಿತ ಸದಸ್ಯರು ವಿಶೇಷ ಅಧಿವೇಶನ ಆರಂಭವಾಗುತ್ತಿದ್ದಂತೆ ಪದಗ್ರಹಣ ಮಾಡಿಕೊಂಡಿದ್ದು ನಂತರ ಬಹುಮತ ಸಾಬೀತಾಗಲಿದೆ. ನಾಳೆ ಸಂಜೆ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


ಈ ಹಿಂದಿನ ಮಹಾರಾಷ್ಟ್ರ ವಿಧಾನಸಭೆಯ ಸಂಪ್ರದಾಯದಂತೆ ಮುಖ್ಯಮಂತ್ರಿ ಮೊದಲು ಪ್ರಮಾಣವಚನ ಸ್ವೀಕರಿಸಿ ನಂತರ ಇತರ ಚುನಾಯಿತ ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದರು. ನಂತರ ಕೂಡಲೇ ಅಥವಾ ಮರುದಿನದ ಅಧಿವೇಶನದಲ್ಲಿ ಬಹುಮತ ಸಾಬೀತು ಪ್ರಕ್ರಿಯೆ ನಡೆಯುತ್ತಿತ್ತು. 


ಆದರೆ ಈ ಬಾರಿ ಚುನಾಯಿತ ಪ್ರತಿನಿಧಿಗಳ ಪ್ರಮಾಣವಚನ ಸ್ವೀಕಾರವಾದ ನಂತರ ನಾಳೆ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.