ಜಾರ್ಖಂಡ್ ರೈತರಿಗೆ ಮೊಬೈಲ್ ಪೋನ್ : ಬಿಜೆಪಿ ಚುನಾವಣಾ ಭರವಸೆ
ರೈತರಿಗೆ ಸುಲಭ ಪಾವತಿಯ ಅವಕಾಶದೊಂದಿಗೆ 3 ಲಕ್ಷರೂ.ವರೆಗೆ ಸಾಲ, ಮೊಬೈಲ್ ಹ್ಯಾಂಡ್ ಸೆಟ್ ಸೇರಿದಂತೆ ಮತ್ತಿತರ ಭರವಸೆವನ್ನೊಳಗೊಂಡ ಚುನಾವಣಾ ಪ್ರಣಾಳಿಕೆಯನ್ನು ಕೇಂದ್ರ ಸಚಿವ ಹಾಗೂ ಹಿರಿಯ ಬಿಜೆಪಿ ಮುಖಂಡ ರವಿ ಶಂಕರ್ ಪ್ರಸಾದ್ ಇಂದು ಬಿಡುಗಡೆ ಮಾಡಿದರು.

ರಾಂಚಿ: ರೈತರಿಗೆ ಸುಲಭ ಪಾವತಿಯ ಅವಕಾಶದೊಂದಿಗೆ 3 ಲಕ್ಷರೂ.ವರೆಗೆ ಸಾಲ, ಮೊಬೈಲ್ ಹ್ಯಾಂಡ್ ಸೆಟ್ ಸೇರಿದಂತೆ ಮತ್ತಿತರ ಭರವಸೆವನ್ನೊಳಗೊಂಡ ಚುನಾವಣಾ ಪ್ರಣಾಳಿಕೆಯನ್ನು ಕೇಂದ್ರ ಸಚಿವ ಹಾಗೂ ಹಿರಿಯ ಬಿಜೆಪಿ ಮುಖಂಡ ರವಿ ಶಂಕರ್ ಪ್ರಸಾದ್ ಇಂದು ಬಿಡುಗಡೆ ಮಾಡಿದರು.
ಬಿಪಿಎಲ್ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ಒದಗಿಸುವುದಾಗಿ ಶಪಥ ಮಾಡಿರುವ ಬಿಜೆಪಿ, ಒಂದು ವೇಳೆ ಮರಳಿ ಅಧಿಕಾರಕ್ಕೆ ಬಂದರೆ, ಶಾಲೆಗೆ ಹೋಗುತ್ತಿರುವ ಹಿಂದುಳಿದ ಮತ್ತು ಬಡ ಕುಟುಂಬಗಳ ಶಾಲಾ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಒದಗಿಸುವುದಾಗಿ ಭರವಸೆ ನೀಡಿದೆ.
9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ 2, 200 ಹಾಗೂ 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ 7.500 ಸ್ಕಾಲರ್ ಷಿಪ್ ನೀಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.
ರಾಂಚಿಯಲ್ಲಿ ನಡೆದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ರಘುಬರ್ ದಾಸ್, ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡಾ ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಲಕ್ಷ್ಮಣ್ ಗಿಲುವಾ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


