ಕಾಶ್ಮೀರದ ಪೊಲೀಸರು, ಸರಪಂಚ್ ಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕರಿಗೆ ಐಎಸ್ಐ ಸೂಚನೆ!
ಕಾಶ್ಮೀರದಲ್ಲಿ ಶಾಂತಿ ಕದಡಲು ಪ್ರಯತ್ನ ಮುಂದುವರೆಸಿರುವ ಪಾಕಿಸ್ತಾನ ತನ್ನ ಗುಪ್ತ ಚರ ಇಲಾಖೆ ಐಎಸ್ಐ ಮೂಲಕ ಭಾರತದ ಪೊಲೀಸರು ಹಾಗೂ ಸರಪಂಚ್ ಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕರಿಗೆ ಸಂದೇಶ ರವಾನೆ ಮಾಡಿದೆ.

ನವದೆಹಲಿ: ಕಾಶ್ಮೀರದಲ್ಲಿ ಶಾಂತಿ ಕದಡಲು ಪ್ರಯತ್ನ ಮುಂದುವರೆಸಿರುವ ಪಾಕಿಸ್ತಾನ ತನ್ನ ಗುಪ್ತ ಚರ ಇಲಾಖೆ ಐಎಸ್ಐ ಮೂಲಕ ಭಾರತದ ಪೊಲೀಸರು ಹಾಗೂ ಸರಪಂಚ್ ಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕರಿಗೆ ಸಂದೇಶ ರವಾನೆ ಮಾಡಿದೆ.
ಜೀ ನ್ಯೂಸ್ ಮಾಧ್ಯಮದ ವರದಿಯ ಪ್ರಕಾರ ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯನ್ನು ಸಕ್ರಿಯವಾಗಿಡಲು ಸತತ ಪ್ರಯತ್ನ ಮಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಹಿಜ್ಬುಲ್ ಮುಕಾಹಿದ್ದೀನ್ ಉಗ್ರ ಸಂಘಟನೆಗೆ ಮಾರಕವಾಗಿ ಪರಿಣಮಿಸಿದ್ದು, ತತ್ಪರಿಣಾಮವಾಗಿ ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಕೇವಲ ಓರ್ವ ಕಮಾಂಡರ್ ಮಾತ್ರ ಬದುಕುಳಿದಿದ್ದಾನೆ.
ಇತ್ತೀಚಿನ ವರದಿಯ ಪ್ರಕಾರ ಬದುಕುಳಿದಿರುವ ಓವ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ರಿಯಾಜ್ ನಾಯ್ಕೂ ಗೆ ಸಕ್ರಿಯವಾಗಿ ಕಾಶ್ಮೀರ ಕಣಿವೆಯಲ್ಲಿ ಶಾಂತಿ ಕದಡುವಂತೆ ಮಾಡಲು ಪಾಕ್ ಸೂಚನೆ ನೀಡಿದೆ. ಈ ಸಂಬಂಧ ಪಾಕ್ ಆಕ್ರಮಿತ ಕಾಶ್ಮೀರದ ನಿಕಿಯಾಲ್ ಸೆಕ್ಟರ್ ನಲ್ಲಿ ಐಎಸ್ಐ ಅಧಿಕಾರಿಗಳು ಭಾರತದ ವಿರುದ್ಧ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಉಗ್ರರು, ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರೂ ಸಹ ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


