ತಿಹಾರ್ ಜೈಲಿನಲ್ಲಿ ಚಿದಂಬರಂ ಭೇಟಿಯಾದ ರಾಹುಲ್, ಪ್ರಿಯಾಂಕಾ
ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂದಿಸಿದಂತೆ ಬಂಧನಕ್ಕೊಳಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ಭೇಟಿಯಾಗಿದ್ದಾರೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂದಿಸಿದಂತೆ ಬಂಧನಕ್ಕೊಳಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ಭೇಟಿಯಾಗಿದ್ದಾರೆ.
ಪ್ರಿಯಾಂಕಾ ಹಾಗೂ ರಾಹುಲ್ ಗಾಂಧಿ ತಿಹಾರ್ ಜೈಲಿನಲ್ಲಿ ಚಿದಂಬರಂ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಕೂಡ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.
ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಚಿದಂಬರಂ ಅವರ ನ್ಯಾಯಾಂಗ ಬಂಧನದ ಅವಧಿ ಬುಧವಾರ ಮುಕ್ತಾಯಗೊಳ್ಳಲಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರ ಕೈಗೆತ್ತಿಕೊಳ್ಳುವ ಒಂದು ಗಂಟೊ ಮೊದಲು ಈ ಭೇಟಿ ನಡೆದಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


