ದೇಶ

ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಅಳವಡಿಕೆ ಡಿಸೆಂಬರ್ 15ರ ವರೆಗೆ ಮುಂದೂಡಿಕೆ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ಅಳವಡಿಸಲು ನೀಡಲಾಗಿದ್ದ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ಡಿಸೆಂಬರ್ 15ರ ವರೆಗೆ ಮುಂದೂಡಿದೆ.

ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಅಳವಡಿಕೆ ಡಿಸೆಂಬರ್ 15ರ ವರೆಗೆ ಮುಂದೂಡಿಕೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ಅಳವಡಿಸಲು ನೀಡಲಾಗಿದ್ದ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ಡಿಸೆಂಬರ್ 15ರ ವರೆಗೆ ಮುಂದೂಡಿದೆ.

ಈ ಮುಂಚೆ ಡಿಸೆಂಬರ್ 1ರಿಂದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗಿತ್ತು. ಈಗ ಮತ್ತೆ 15 ದಿನ ಕಾಲವಾಕಾಶ ನೀಡಲಾಗಿದ್ದು, ಒಂದು ವೇಳೆ ಡಿಸೆಂಬರ್ 15ರ ನಂತರವೂ ಫ್ಯಾಸ್ಟ್ ಟ್ಯಾಗ್ ಅಳವಡಿಸದ ವಾಹನಗಳಿಗೆ ಡಬಲ್ ಶುಲ್ಕ ವಿಧಿಸಲಾಗುತ್ತಿದೆ.

ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಸಲು ನಾಗರಿಕರಿಗೆ ಸೂಕ್ತ ಸಮಯಾವಕಾಶ ನೀಡಬೇಕಾಗುತ್ತದೆ. ಹೀಗಾಗಿ ಡಿಸೆಂಬರ್ 1ರ ಗಡುವನ್ನು ಡಿಸೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.

ಕೆಲವು ಟೋಲ್ ಗಳಲ್ಲಿ ಸಾಕಷ್ಟು ಫಾಸ್ಟ್‌ಟ್ಯಾಗ್‌ ಗಳು ಇರದೇ ಇದ್ದ ಕಾರಣ ಜನರಿಗೆ ಕೊಂಡುಕೊಳ್ಳಲಾಗುತ್ತಿಲ್ಲ. ಈ ಕಾರಣವನ್ನು ಮನಗಂಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತನ್ನ ನಿರ್ಧಾರವನ್ನು ಮುಂದೂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.