ವಿಧಿ 370 ರದ್ದತಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್, ವಿಚಾರಣೆ ನ.14ಕ್ಕೆ ಮುಂದೂಡಿಕೆ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಿ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಿದೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಿ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಿದೆ.
ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ವಿಧಿ 370 ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ವಿಚಾರಣೆಗಾಗಿ ಸಾಂವಿಧಾನಿಕ ಪೀಠಕ್ಕೆ ರವಾನೆ ಮಾಡಿತ್ತು. ಅದರಂತೆ ಇಂದು ಈ ಅರ್ಜಿಗಳ ವಿಚಾರಣೆ ಆರಂಭಿಸಿದ ಸಾಂವಿಧಾನಿಕ ಪೀಠ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಇಂದು ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿ, ಜಮ್ಮುಕಾಶ್ಮಿರದ ವಿಶೇಷ ಸ್ಥಾನಮಾನ ರದ್ದತಿಯ ಬಗ್ಗೆ ಎದ್ದಿರುವ ಆಕ್ಷೇಪಗಳಿಗೆ ಇನ್ನು ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಿದೆ.
ಜಮ್ಮುಕಾಶ್ಮೀರದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ಆಗಸ್ಟ್ 5ರಂದು ರದ್ದುಗೊಳಿಸಿತ್ತು. ಬಳಿಕ ಜಮ್ಮುಕಾಶ್ಮೀರ ಮತ್ತು ಲಡಾಕ್ಗೆ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ರಾಜ್ಯಸಭಾ ಸದಸ್ಯ ವೈಕೋ ಸೇರಿದಂತೆ ಹಲವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
Related Article
ವಿಧಿ 370 ರದ್ಧತಿ ಕೋರಿದ್ದ ಅರ್ಜಿ ಸಾಂವಿಧಾನಿಕ ಪೀಠಕ್ಕೆ ರವಾನೆ, ವೈಕೋ ಅರ್ಜಿ ನಿರಾಕರಿಸಿದ ಸುಪ್ರೀಂ ಕೋರ್ಟ್
ಕಾಶ್ಮೀರದಲ್ಲೀಗ ಯಾವ ನಿರ್ಬಂಧವಿಲ್ಲ, 370ನೇ ವಿಧಿ ರದ್ದತಿಗೆ ಜಾಗತಿಕ ಬೆಂಬಲವಿದೆ: ಅಮಿತ್ ಶಾ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


