ಜಮ್ಮು- ಕಾಶ್ಮೀರ: ಗಂಡರ್‌ಬಲ್ ನಲ್ಲಿ ಇಬ್ಬರು ಉಗ್ರರ ಹತ್ಯೆ, ಜಂಟಿ ಕಾರ್ಯಾಚರಣೆ ಪ್ರಗತಿಯಲ್ಲಿ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಗಂಡರ್ ಬಲ್ ಜಿಲ್ಲೆಯ ಟ್ರಂಖಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಂದು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಗಂಡರ್ ಬಲ್ : ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಗಂಡರ್ ಬಲ್ ಜಿಲ್ಲೆಯ ಟ್ರಂಖಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಂದು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್ 28 ರಂದು ಉಗ್ರನೊಬ್ಬನನ್ನು ಹತ್ಯೆ ಮಾಡಿದ್ದ ಭದ್ರತಾ ಪಡೆಗಳು ಇಂದು ಬೆಳಗ್ಗೆ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿವೆ. ಎನ್ ಕೌಂಟರ್ ನಡೆದ ಸ್ಥಳದಿಂದ ಭಾರೀ ಪ್ರಮಾಣದ ಶಸಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳಗ್ಗೆ ಉಗ್ರನೊಬ್ಬನನ್ನು ಹತ್ಯೆ ಮಾಡಿರುವುದಾಗಿ ಭಾರತೀಯ ಸೇನೆಯ ಉತ್ತರ ವಿಭಾಗದ ಕಮಾಂಡರ್ ಟ್ವೀಟ್ ಮಾಡಿದ್ದರು. ಅದರ ಬೆನ್ನಲ್ಲೇ ಗಂಡರ್ ಬಲ್ ನಲ್ಲಿ ಮತ್ತೊಬ್ಬ ಉಗ್ರನನ್ನು ಹತ್ಯೆಗೈಯಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


