ದೇಶ

ಕಾಶ್ಮೀರದ ವಿಷಯದಲ್ಲಿ ಕಾಂಗ್ರೆಸ್, ಮೋದಿ ನಿಲುವು ಒಂದೇ: ಶಶಿ ತರೂರ್ 

ಕಾಂಗ್ರೆಸ್ ಪಕ್ಷ ಕಾಶ್ಮೀರದ ಆರ್ಟಿಕಲ್ 370 ರದ್ದುಗೊಳಿಸಿರುವ ವಿಷಯದಲ್ಲಿ ಪಾಕಿಸ್ತಾನದ ಭಾಷೆಯನ್ನು ಮಾತನಾಡುತ್ತಿದೆ ಎಂಬ ಬಿಜೆಪಿ ಆರೋಪವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ತಳ್ಳಿಹಾಕಿದ್ದು, ಕಾಶ್ಮೀರ ವಿಚಾರದಲ್ಲಿ ಮೋದಿ ಹಾಗೂ ಕಾಂಗ್ರೆಸ್ ನಿಲುವು ಒಂದೇ ಆಗಿದೆ ಎಂದು ಹೇಳಿದ್ದಾರೆ.

ಕಾಶ್ಮೀರದ ವಿಷಯದಲ್ಲಿ ಕಾಂಗ್ರೆಸ್, ಮೋದಿ ನಿಲುವು ಒಂದೇ: ಶಶಿ ತರೂರ್ 
ಕಾಶ್ಮೀರದ ವಿಷಯದಲ್ಲಿ ಕಾಂಗ್ರೆಸ್, ಮೋದಿ ನಿಲುವು ಒಂದೇ: ಶಶಿ ತರೂರ್
Published On :

ನವದೆಹಲಿ: ಕಾಂಗ್ರೆಸ್ ಪಕ್ಷ ಕಾಶ್ಮೀರದ ಆರ್ಟಿಕಲ್ 370 ರದ್ದುಗೊಳಿಸಿರುವ ವಿಷಯದಲ್ಲಿ ಪಾಕಿಸ್ತಾನದ ಭಾಷೆಯನ್ನು ಮಾತನಾಡುತ್ತಿದೆ ಎಂಬ ಬಿಜೆಪಿ ಆರೋಪವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ತಳ್ಳಿಹಾಕಿದ್ದು, ಕಾಶ್ಮೀರ ವಿಚಾರದಲ್ಲಿ ಮೋದಿ ಹಾಗೂ ಕಾಂಗ್ರೆಸ್ ನಿಲುವು ಒಂದೇ ಆಗಿದೆ ಎಂದು ಹೇಳಿದ್ದಾರೆ. 

ಕಾಂಗ್ರೆಸ್ ಪಕ್ಷ ಜಮ್ಮು-ಕಾಶ್ಮೀರ ನಿವಾಸಿಗಳನ್ನು ಹೇಗೆ ನಡೆಸಿಕೊಳ್ಳಬೇಕೆಂಬುದನ್ನು ಮಾತ್ರ ಹೇಳುತ್ತಿದೆ. ಕಾಂಗ್ರೆಸ್ ಹೇಳಿಕೆಗಳಿಂದ ಪಾಕಿಸ್ತಾನಕ್ಕೆ ಸಹಾಯವಾಗುತ್ತಿದೆ ಎಂಬ ಬಿಜೆಪಿ ಅವರ ಆರೋಪ ಅಚ್ಚರಿ ಉಂಟುಮಾಡುತ್ತಿದೆ. ವಿಪಕ್ಷವಾಗಿದ್ದುಕೊಂಡು ಕಾಂಗ್ರೆಸ್ ಜಮ್ಮು-ಕಾಶ್ಮೀರದ ಜನತೆಯನ್ನು ಹೇಗೆ ನಡೆಸಿಕೊಳ್ಳಬೇಕೆಂಬುದನ್ನಷ್ಟೇ ಹೇಳುತ್ತಿದೆ. ನಾವು ಪಾಕಿಸ್ತಾನಕ್ಕೆ ಸಹಕಾರಿಯಾಗುವಂತಹ ಯಾವುದೇ ಹೇಳಿಕೆಗಳನ್ನೂ ನೀಡುತ್ತಿಲ್ಲ ಎಂದು ಶಶಿ ತರೂರ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.