ಶಾಸಕಿ ಅದಿತಿ ಸಿಂಗ್ ಕಾಂಗ್ರೆಸ್ ಶೋಕಾಸ್ ನೋಟೀಸ್
ಉತ್ತರ ಪ್ರದೇಶದ ಪಕ್ಷದ ಶಾಸಕಿ ಅದಿತಿ ಸಿಂಗ್ ಅವರಿಗೆ ಕಾಂಗ್ರೆಸ್ ಶೋಕಾಸ್ ನೋಟಿಸ್ ನೀಡಿದೆ.

ಲಕ್ನೋ: ಉತ್ತರ ಪ್ರದೇಶದ ಪಕ್ಷದ ಶಾಸಕಿ ಅದಿತಿ ಸಿಂಗ್ ಅವರಿಗೆ ಕಾಂಗ್ರೆಸ್ ಶೋಕಾಸ್ ನೋಟಿಸ್ ನೀಡಿದೆ.
ಪಕ್ಷ ಕೈಗೊಂಡ ನಿರ್ಣಯದ ವಿರುದ್ಧ ನಡೆದುಕೊಂಡಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮಹಾತ್ಮ ಗಾಂಧಿಯವರ 150ನೇ ಜಯಂತಿ ಅಂಗವಾಗಿ 36 ಗಂಟೆಗಳ ವಿಶೇಷ ರಾಜ್ಯ ವಿಧಾನಸಭಾ ಅಧಿವೇಶನ ಕರೆದಿತ್ತು. ಆದರೆ, ವಿಶೇಷ ಅಧಿವೇಶನವನ್ನು ಪ್ರತಿಪಕ್ಷಗಳಾದ ಸಮಾಜವಾದಿ ಪಕ್ಷ, ಬಿಎಸ್‌ಪಿ ಮತ್ತು ಕಾಂಗ್ರೆಸ್ ಬಹಿಷ್ಕರಿಸಿದ್ದವು. ಆದರೆ ಅದಿತಿ ಸಿಂಗ್ ಅವರು ಮಾತ್ರ ಬುಧವಾರ ವಿಧಾನಸಭಾ ಕಲಾಪದಲ್ಲಿ ಭಾಗವಹಿಸಿದ್ದರು.
ಹಾಗಾಗಿ ಕಾಂಗ್ರೆಸ್ ಆಕೆಗೆ ಶೋ-ಕಾಸ್ ನೋಟಿಸ್ ನೀಡಿ, ಎರಡು ದಿನಗಳಲ್ಲಿ ವಿವರಣೆ ನೀಡುವಂತೆ ತಾಕೀತು ಮಾಡಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಅಜಯ್ ಕುಮಾರ್ ಲಲ್ಲೂ, ಪಕ್ಷದ ವಿಪ್ ಧಿಕ್ಕರಿಸಿ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಶಾಸಕಿ ಅದಿತಿ ಸಿಂಗ್ ಅವರಿಗೆ ನೋಟಿಸ್ ನೀಡಿ ಎರಡು ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ಕೋರಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


