ಕಾಶ್ಮೀರದಲ್ಲಿ ಉಗ್ರರ ಅಡಗು ತಾಣಗಳು ಪತ್ತೆ: 17 ಗ್ರೆನೇಡ್ ವಶಕ್ಕೆ ಪಡೆದ ಸೇನೆ
370 ವಿಧಿ ರದ್ದತಿ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ವಿಧ್ವಂಸಕ ಕೃತ್ಯವೆಸಗಲು ನಾನಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದು, ಈ ಯತ್ನಗಳನ್ನು ಭಾರತೀಯ ಸೇನೆ ವಿಫಲಗೊಳ್ಳುವಂತೆ ಮಾಡುತ್ತಿದೆ.

ಜಮ್ಮು: 370 ವಿಧಿ ರದ್ದತಿ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ವಿಧ್ವಂಸಕ ಕೃತ್ಯವೆಸಗಲು ನಾನಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದು, ಈ ಯತ್ನಗಳನ್ನು ಭಾರತೀಯ ಸೇನೆ ವಿಫಲಗೊಳ್ಳುವಂತೆ ಮಾಡುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ಪ್ರದೇಶದಲ್ಲಿರುವ ಉಗ್ರರ ಅಡಗುತಾಣಗಳು ಪತ್ತೆಯಾಗಿದ್ದು, 17 ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.
ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪೂಂಚ್ ಜಿಲ್ಲೆಯ ಲೋರನ್ ಗಡಿ ಪಟ್ಟಿಯ ಖಾರಗಲಿ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಉಗ್ರರ ಅಡಗುತಾಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


