ಪಾಕ್ ಆಹ್ವಾನ ಒಪ್ಪಿಲ್ಲ, ಭಕ್ತರಂತೆ ಸಿಂಗ್ ಕರ್ತಾರ್ಪುರಕ್ಕೆ ತೆರಳುತ್ತಿದ್ದಾರೆ: ಪಂಜಾಬ್ ಸಿಎಂ
ಪಾಕಿಸ್ತಾನದ ಆಹ್ವಾನವನ್ನು ಒಪ್ಪಿ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ತೆರಳುತ್ತಿಲ್ಲ. ಭಕ್ತರಾಗಿ ಗುರುದ್ವಾರಕ್ಕಷ್ಟೇ ಭೇಟಿ ನೀಡಲಿದ್ದಾರೆಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ಪಾಕಿಸ್ತಾನದ ಆಹ್ವಾನವನ್ನು ಒಪ್ಪಿ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ತೆರಳುತ್ತಿಲ್ಲ. ಭಕ್ತರಾಗಿ ಗುರುದ್ವಾರಕ್ಕಷ್ಟೇ ಭೇಟಿ ನೀಡಲಿದ್ದಾರೆಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾದ ಪಂಜಾಬ್ ಮುಖ್ಯಮಂತ್ರಿಗಳು ಈ ಕುರಿತು ಮಾತುಕತೆ ನಡೆಸಿದ್ದಾರೆ.
ಮಾತುಕತೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನವು ಕರ್ತಾರ್ಪುರ ಕಾರಿಡಾರ್ ಉದ್ಘಾಟಿಸಿದ ಬಳಿಕ ನ.9 ರಂದು ಕರ್ತಾರ್ಪುರ ಸಾಹಿಬ್ ಗುರುದ್ವಾರಕ್ಕೆ ತೆರಳಲಿರುವ ಸರ್ವಪಕ್ಷ ಜಾಥಾದಲ್ಲಿ ಭಾಗಿಯಾಗಲು ಮನಮೋಹನ್ ಸಿಂಗ್ ಒಪ್ಪಿಗೆ ಸೂಚಿಸಿದ್ದಾರೆಂದು ಹೇಳಿದ್ದಾರೆ.
ಗುರುದ್ವಾರಕ್ಕೆ ಭೇಟಿ ನೀಡಲಿರುವ ನಿಯೋಗದಲ್ಲಿ ಭಾಗಿಯಾಗಲು ನೀಡಿದ ಆಹ್ವಾನವನ್ನು ಸಿಂಗ್ ಅವರು ಒಪ್ಪಿದ್ದಾರೆ. ಆದರೆ, ಪಾಕಿಸ್ತಾನದ ಆಹ್ವಾನವನ್ನು ಒಪ್ಪಿ ಕರ್ತಾರ್ಪುರಕ್ಕೆ ಹೋಗುತ್ತಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


