ಆಯ್ದ ಅಧಿಕಾರಿಗಳ ಟಾರ್ಗೆಟ್: ಕೇಂದ್ರದ ಕ್ರಮ ಖಂಡಿಸಿ ಪ್ರಧಾನಿ ಮೋದಿಗೆ 71 ನಿವೃತ್ತ ಅಧಿಕಾರಿಗಳಿಂದ ಪತ್ರ
ಕೇಂದ್ರ ಸರ್ಕಾರ ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯದ ನಾಲ್ವರು ನಿವೃತ್ತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕ ಅನುಮತಿ ನೀಡಿರುವುದನ್ನು ಖಂಡಿಸಿ 71 ನಿವೃತ್ತ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯದ ನಾಲ್ವರು ನಿವೃತ್ತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕ ಅನುಮತಿ ನೀಡಿರುವುದನ್ನು ಖಂಡಿಸಿ 71 ನಿವೃತ್ತ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರ ಕಳೆದ ತಿಂಗಳು ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ನೀತಿ ಆಯೋಗದ ಮಾಜಿ ಸಿಇಒ ಸಿಂಧುಶ್ರೀ ಖುಲ್ಲರ್ ಹಾಗೂ ಇತರೆ ಮೂವರು ನಿವೃತ್ತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿಬಿಐಗೆ ಅನುಮತಿ ನೀಡಿತ್ತು. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ನಿವೃತ್ತ ಅಧಿಕಾರಿಗಳು, ಸಂಕುಚಿತ ರಾಜಕೀಯ ಲಾಭಗಳಿಗಾಗಿ ಕೆಲ ಆಯ್ದ ನಿವೃತ್ತ ಹಾಗೂ ಹಾಲಿ ಅಧಿಕಾರಿಗಳನ್ನು ಟಾರ್ಗೆಟ್ ಮಾಡುತ್ತಿರುವುದು ಸರಿಯಲ್ಲ ಎಂದು ಪ್ರಧಾನಿಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮಅಧಿಕೃತ ಕರ್ತವ್ಯದ ಭಾಗವಾಗಿ ಕ್ರಮ ಕೈಗೊಳ್ಳುವ ಅಧಿಕಾರಿಗಳಿಗೆ ಯಾವುದೇ ರಕ್ಷಣೆ ನೀಡದಿರುವುದು ಆತಂಕಕಾರಿ. ಈ ರೀತಿ ಪ್ರಮಾಣಿಕ ಅಧಿಕಾರಿಗಳನ್ನು ಅವರದಲ್ಲದ ತಪ್ಪಿಗೆ ಹಾಗೂ ಆಗಿನ ಸರ್ಕಾರದ ನೀತಿಯಂತೆ ಕಾರ್ಯನಿರ್ವಹಿಸಿದ್ದಕ್ಕೆ ಅವರನ್ನು ಟಾರ್ಗೆಟ್ ಮಾಡಿದರೆ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯುತ್ತದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಮಾಜಿ ಸಂಪುಟ ಕಾರ್ಯದರ್ಶಿ ಕೆಎಂ ಚಂದ್ರಶೇಖರ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಸುಜಾತ ಸಿಂಗ್ ಹಾಗೂ ಮಾಜಿ ವಿದೇಶಾಂಗ ಕಾರ್ಯದರ್ಶಿ ಹಾಗೂ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್ ಸೇರಿದಂತೆ 71 ಅಧಿಕಾರಿಗಳು ಪ್ರಧಾನಿಗೆ ಬರೆದ ಪತ್ರಕ್ಕೆ ಸಹಿ ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


