ದೇಶ

ಪ್ರತಿಪಕ್ಷದ ನಾಯಕ, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಅಭಿಪ್ರಾಯ ಆಹ್ವಾನಿಸಿದ ಕಾಂಗ್ರೆಸ್

ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ, ವಿಧಾನಮಂಡಲ ಉಭಯ ಸದನಗಳ ಪ್ರತಿಪಕ್ಷ ನಾಯಕ ಜವಾಬ್ದಾರಿಗೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಜಿಜ್ಞಾಸೆಗೆ ಕಾಂಗ್ರೆಸ್ ಹೈಕಮಾಂಡ್ ನಿಲುಕಿದ್ದು, ಈ ಸಂಬಂಧ ರಾಜ್ಯದ ಹಿರಿಯ ಮುಖಂಡರ ಅಭಿಪ್ರಾಯ ಕ್ರೋಢೀಕರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಪ್ರತಿಪಕ್ಷದ ನಾಯಕ, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಅಭಿಪ್ರಾಯ ಆಹ್ವಾನಿಸಿದ ಕಾಂಗ್ರೆಸ್
ಪ್ರತಿಪಕ್ಷದ ನಾಯಕ, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಅಭಿಪ್ರಾಯ ಆಹ್ವಾನಿಸಿದ ಕಾಂಗ್ರೆಸ್
Published On :

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ, ವಿಧಾನಮಂಡಲ ಉಭಯ ಸದನಗಳ ಪ್ರತಿಪಕ್ಷ ನಾಯಕ ಜವಾಬ್ದಾರಿಗೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಜಿಜ್ಞಾಸೆಗೆ ಕಾಂಗ್ರೆಸ್ ಹೈಕಮಾಂಡ್ ನಿಲುಕಿದ್ದು, ಈ ಸಂಬಂಧ ರಾಜ್ಯದ ಹಿರಿಯ ಮುಖಂಡರ ಅಭಿಪ್ರಾಯ ಕ್ರೋಢೀಕರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ವಿಧಾನ ಮಂಡಲದ ಎರಡೂ ಸದನಗಳಿಗೆ ಪ್ರತಿಪಕ್ಷದ ನಾಯಕರು, ಶಾಸಕಾಂಗ ಪಕ್ಷದ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಪಕ್ಷದ 60ಜನ ಹಿರಿಯ ನಾಯಕರ ಅಭಿಪ್ರಾಯ ಆಲಿಸುವ ಕಾರ್ಯದಲ್ಲಿ ನಿರತವಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂಧನ್ ಮಿಸ್ತ್ರಿ ನಾಯಕರ ಅಭಿಪ್ರಾಯ ಸಂಗ್ರಹಿಸಲು ಬೆಂಗಳೂರಿಗೆ ಆಗಮಿಸಿದ್ದು, ಪ್ರತಿಯೊಬ್ಬ ನಾಯಕರು ಪ್ರತಿ ಹುದ್ದೆಗೆ ಕನಿಷ್ಠ ಮೂವರು ಅರ್ಹರ ಹೆಸರುಗಳನ್ನು ಸೂಚಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.