ಮೆಟ್ರೋಗಾಗಿ ಮರಗಳ ಮಾರಣಹೋಮಕ್ಕೆ ಕೇಂದ್ರ ಪರಿಸರ ಸಚಿವರ ಸಮರ್ಥನೆ: ದೆಹಲಿ ಮೆಟ್ರೋ ಉದಾಹರಣೆ!
ಮುಂಬೈನ ಪ್ರಮುಖ ಹಸಿರು ಪ್ರದೇಶವಾಗಿರುವ ಆರೆ ಕಾಲೋನಿಯಲ್ಲಿ ಮೆಟ್ರೋ ಕಾರ್ ಶೆಡ್ ಗಾಗಿ ಮರಗಳನ್ನು ಕಡಿಯುವುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಸಮರ್ಥಿಸಿದ್ದಾರೆ.

ನವದೆಹಲಿ: ಮುಂಬೈನ ಪ್ರಮುಖ ಹಸಿರು ಪ್ರದೇಶವಾಗಿರುವ ಆರೆ ಕಾಲೋನಿಯಲ್ಲಿ ಮೆಟ್ರೋ ಕಾರ್ ಶೆಡ್ ಗಾಗಿ ಮರಗಳನ್ನು ಕಡಿಯುವುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಸಮರ್ಥಿಸಿದ್ದಾರೆ.
ಮರಗಳನ್ನು ಕಡಿಯುವುದನ್ನು ವಿರೋಧಿಸಿದ 29 ಪರಿಸರ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಈ ಬೆನ್ನಲ್ಲೇ ಪ್ರಕಾಶ್ ಜಾವ್ಡೇಕರ್ ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಯಲ್ಲಿ ಮೊದಲ ಮೆಟ್ರೋ ನಿಲ್ದಾಣ ನಿರ್ಮಾಣವಾದಾಗ 20-25 ಮರಗಳನ್ನು ಕತ್ತರಿಸಲಾಗಿತ್ತು. ಆಗಲೂ ಜನ ಪ್ರತಿಭಟನೆ ನಡೆಸಿದ್ದರು. ಇಂದು ಅದು ವಿಶ್ವದಲ್ಲೇ ಅತ್ಯುತ್ತಮ ಮೆಟ್ರೋ ಆಗಿದೆ. ಮೆಟ್ರೋ ಅಂದು ಕತ್ತರಿಸಿದ್ದ ಒಂದೊಂದು ಮರಕ್ಕೂ ಬದಲಾಗಿ 5 ಮರಗಳನ್ನು ಬೆಳೆಸಿದೆ. ಈಗ 271 ನಿಲ್ದಾಣಗಳಿವೆ. ಇಂದು 30 ಲಕ್ಷ ಜನರು ಮೆಟ್ರೋ ಬಳಸುತ್ತಿದ್ದಾರೆ. ಪರಿಸರ ಸಂರಕ್ಷಣೆ ಹಾಗೂ ಅಭಿವೃದ್ಧಿ ಎರಡೂ ಒಟ್ಟಿಗೆ ನಡೆಯಬೇಕು ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ಕೆಲವು ಹಸಿರು ಕಾರ್ಯಕರ್ತರು ಈ ಪ್ರದೇಶದಲ್ಲಿ 2656 ಮರಗಳನ್ನು ಕಡಿಯುವ ಮುಂಬೈ ಮೆಟ್ರೋ ರೈಲು ಕಾರ್ಪೊರೇಶನ್ ಲಿಮಿಟೆಡ್ ಕ್ರಮವನ್ನು ತಡೆಯಲು ಕೋರಿ ಹೊಸ ಅರ್ಜಿಯನ್ನು ಸಲ್ಲಿಸಿದ್ದರು. ಮುಂಬೈ ನಗರಾಡಳಿತವು ಮರ ಕಡಿಯಲು ಅನುಮತಿ ನೀಡಿತ್ತು. ಮರಗಳನ್ನು ಕಡಿಯುವುದಕ್ಕೆ ತಡೆ ನೀಡಲು ಬಾಂಬೆ ಹೈಕೋರ್ಟ್ ಶನಿವಾರ ನಿರಾಕರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


