ಇಂದು ಬೆಳಗ್ಗೆಯೇ ಕರ್ನಾಟಕ ರಾಜ್ಯಕ್ಕೆ ನೆರೆ ಪರಿಹಾರ ಹಣ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳ ಭೀಕರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ ಎಂದು ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕರಿಂದಲೂ ತೀವ್ರ ಟೀಕೆಗಳು ಕೇಳಿಬಂದಿದ್ದವು.

ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳ ಭೀಕರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ ಎಂದು ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕರಿಂದಲೂ ತೀವ್ರ ಟೀಕೆಗಳು ಕೇಳಿಬಂದಿದ್ದವು.
ಕೊನೆಗೂ 60 ದಿನಗಳಾದ ನಂತರ ನಿನ್ನೆ ಕೇಂದ್ರ ಸರಕಾರ ರಾಜ್ಯಕ್ಕೆ 1,200 ಕೋಟಿ ರೂಪಾಯಿ ನೆರೆ ಪರಿಹಾರ ನಿಧಿ ನೀಡಿದ್ದು, ಇಂದು ಬೆಳಗ್ಗೆಯೇ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ಶನಿವಾರ ಬೆಳಗ್ಗೆಯೇ ನೆರೆ ಪರಿಹಾರ ಹಣವನ್ನು ಬಿಡುಗಡೆ ಮಾಡುವುದಾಗಿ ಹಣಕಾಸು ಸಚಿವಾಲಯ ನನಗೆ ಭರವಸೆ ನೀಡಿದೆ' ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್‌ಡಿಆರ್‌ಎಫ್) 1,813.75 ಕೋಟಿ ರೂಪಾಯಿ ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಕರ್ನಾಟಕಕ್ಕೆ 1,200 ಕೋಟಿ ರೂಪಾಯಿ ಮತ್ತು ಬಿಹಾರಕ್ಕೆ 400 ಕೋಟಿ ರೂಪಾಯಿ ನೀಡಲಾಗಿದೆ. ಈ ಹಣವನ್ನು ಇಂದು (ಶನಿವಾರ) ಬೆಳಗ್ಗೆಯೇ ಬಿಡುಗಡೆ ಮಾಡುವುದಾಗಿ ಸಚಿವೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


