ನಾಳೆ ಫಾರೂಕ್ ಅಬ್ದುಲ್ಲಾ ಭೇಟಿಗೆ ನ್ಯಾಷನಲ್ ಕಾನ್ಫರೆನ್ಸ್ ನಿಯೋಗಕ್ಕೆ ಅನುಮತಿ
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಗೃಹ ಬಂಧನದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹಾಗೂ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಅವರನ್ನು ಭಾನುವಾರ ಭೇಟಿಯಾಗಲು ಜಮ್ಮು ಮತ್ತು ಕಾಶ್ಮೀರ ಆಡಳಿತ ಪಕ್ಷದ ನಿಯೋಗಕ್ಕೆ ಅನುಮತಿ ನೀಡಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಗೃಹ ಬಂಧನದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹಾಗೂ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಅವರನ್ನು ಭಾನುವಾರ ಭೇಟಿಯಾಗಲು ಜಮ್ಮು ಮತ್ತು ಕಾಶ್ಮೀರ ಆಡಳಿತ ಪಕ್ಷದ ನಿಯೋಗಕ್ಕೆ ಅನುಮತಿ ನೀಡಿದೆ.
ನ್ಯಾಷನಲ್ ಕಾನ್ಫರೆನ್ಸ್ ಹಂಗಾಮಿ ಅಧ್ಯಕ್ಷ ದೇವೇಂದ್ರ ಸಿಂಗ್ ರಾಣಾ ನೇತೃತ್ವದ ನಿಯೋಗ ನಾಳೆ ವಿಮಾನದ ಮೂಲಕ ಜಮ್ಮು ತಲುಪಲಿದ್ದಾರೆ ಎಂದು ಪಕ್ಷದ ವಕ್ತಾರ ಮದನ್ ಮಾಂಟೂ ತಿಳಿಸಿದ್ದಾರೆ.
ರಾಣಾ ಅವರು ತಮ್ಮ ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಿಗೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ರಾಜ್ಯಪಾಲರು, ನಾಳೆ ಭೇಟಿಗೆ ಅವಕಾಶ ನೀಡಿದ್ದಾರೆ.
89 ವರ್ಷದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಶ್ರೀನಗರದ ತಮ್ಮ ನಿವಾಸದಲ್ಲಿ ಗೃಹ ಬಂಧನ ದಲ್ಲಿದ್ದರೆ, ಅವರ ಮಗ ಒಮರ್ ಅಬ್ದುಲ್ಲಾ ರಾಜ್ಯ ಸರ್ಕಾರದ ಅತಿಥಿ ಗೃಹದಲ್ಲಿ ಗೃಹ ಬಂಧನದಲ್ಲಿರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


