ಕಾಶ್ಮೀರದಲ್ಲಿ 200-300 ಭಯೋತ್ಪಾದಕರು ಸಕ್ರಿಯ,ಮತ್ತಷ್ಟು ಉಗ್ರರನ್ನು ಒಳಕಳಿಸಲು ಪಾಕ್ ಯತ್ನ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದ್ದು, 200-300 ಜನ ಭಯೋತ್ಪಾದಕರು ರಾಜ್ಯದಲ್ಲಿ ಸಕ್ರಿಯರಾಗಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಘ್ ಸಿಂಗ್ ಹೇಳಿದ್ದಾರೆ.

ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದ್ದು, 200-300 ಜನ ಭಯೋತ್ಪಾದಕರು ರಾಜ್ಯದಲ್ಲಿ ಸಕ್ರಿಯರಾಗಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಘ್ ಸಿಂಗ್ ಹೇಳಿದ್ದಾರೆ.
ಚಳಿಗಾಲದ ವೇಳೆಗೆ ಆದಷ್ಟೂ ಹೆಚ್ಚು ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕಿಸ್ತಾನ ಗಡಿಯಾಚೆಗಿನ ಗುಂಡಿನ ದಾಳಿಯನ್ನು ನಿರಂತರವಾಗಿ ನಡೆಸುತ್ತಿದೆ. ಭಾರತೀಯ ಸೇನೆಯಿಂದ ಪ್ರತಿದಾಳಿ ನಡೆದ ಹೊರತಾಗಿಯೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಯೋತ್ಪಾದಕರು ಒಳನುಸುಳಿದ್ದಾರೆ.
200-300 ಭಯೋತ್ಪಾದಕರು ಜಮ್ಮು-ಕಾಶ್ಮೀರದಲ್ಲಿ ಸಕ್ರಿಯರಾಗಿದ್ದಾರೆ. ಇದೇ ಸಂಖ್ಯೆ ಅಂತಿಮವಲ್ಲ ಎಂದು ದಿಲ್ಬಾಘ್ ಸಿಂಗ್ ಮಾಹಿತಿ ನೀಡಿದ್ದಾರೆ. ಭಯೋತ್ಪಾದಕರನ್ನು ಆದಷ್ಟೂ ಒಳಗೆ ಕಳಿಸಲು ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆಯನ್ನು ತೀವ್ರಗೊಳಿಸಿದೆ ಎಂದು ಡಿಜಿಪಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


