ಜೆಡಿಯು ಅಧ್ಯಕ್ಷರಾಗಿ ನಿತೀಶ್ ಕುಮಾರ್ ಪುನಾರಾಯ್ಕೆ
ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರನ್ನು ಜೆಡಿಯುನ ಅಧ್ಯಕ್ಷರನ್ನಾಗಿ ಮತ್ತೊಂದು ಅವಧಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರನ್ನು ಜೆಡಿಯುನ ಅಧ್ಯಕ್ಷರನ್ನಾಗಿ ಮತ್ತೊಂದು ಅವಧಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಜೆಡಿಯು ರಾಷ್ಟ್ರಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಹಿಂತೆಗೆದುಕೊಳ್ಳಲು ಇಂದು ಕೊನೆಯ ದಿನವನ್ನು ನಿಗದಿಪಡಿಸಲಾಗಿತ್ತು. ಆ ಸ್ಥಾನಕ್ಕೆ ನಿತೀಶ್ ಕುಮಾರ್ ಒಬ್ಬರೇ ಅಭ್ಯರ್ಥಿಯಾಗಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಪಕ್ಷದ ರಾಷ್ಟ್ರೀಯ ಚುನಾವಣಾಧಿಕಾರಿ ಅನೀಲ್ ಹೆಗ್ಡೆ ತಿಳಿಸಿದ್ದಾರೆ.
ನಿತೀಶ್ ಕುಮಾರ್ ಪರವಾಗಿ ಪಕ್ಷದ ಮುಖಂಡರು ನಾಲ್ಕು ಸೆಟ್ ನಾಮಪತ್ರಗಳನ್ನು ಸಲ್ಲಿಸಿದ್ದರು. ಧೀರ್ಘಕಾಲದಿಂದಲೂ ಪಕ್ಷದ ಅಧ್ಯಕ್ಷರಾಗಿರುವ ನಿತೀಶ್ ಕುಮಾರ್, ಮುಂಬರುವ ವಿಧಾನಸಭಾ ಉಪ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯೂ ಆತಂಕಕಾರಿವಾಗಿದೆ.
ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು, ಅನೇಕ ಕಾರಣಗಳಿಂದಾಗಿ ಮೈತ್ರಿ ನಾಯಕತ್ವವನ್ನು ಟೀಕಿಸಿದ್ದಾರೆ. ವಿಶೇಷವಾಗಿ ಪಾಟ್ನಾದಲ್ಲಿನ ಪ್ರವಾಹ ನಿರ್ವಹಣೆ ಕುರಿತಂತೆ ಧ್ವನಿ ಎತ್ತಿದ್ದಾರೆ. ಕೇಸರಿ ಪಕ್ಷದ ನಾಯಕರು ಮೈತ್ರಿ ನಾಯಕತ್ವ ವಹಿಸಿಕೊಳ್ಳಲು ನಿತೀಶ್ ಕುಮಾರ್ ದಾರಿ ಮಾಡಿಕೊಡಬೇಕೆಂದು ಮತ್ತೊಬ್ಬ ಬಿಜೆಪಿ ಮುಖಂಡ ಸಂಜಯ್ ಪಾಸ್ವಾನ್ ಒತ್ತಾಯಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಮೈತ್ರಿಯಲ್ಲೂ ಪಾರುಪತ್ಯ ಸಾಧಿಸಲು ಯತ್ನಿಸುತ್ತಿದೆ. ಆದಾಗ್ಯೂ, ನಿತೀಶ್ ಕುಮಾರ್ ಅವರ ವರ್ಚಸ್ಸು ಎಂದಿಗೂ ಮಂಕಾಗುವುದಿಲ್ಲ ಎಂಬುದು ಜೆಡಿಯು ಮುಖಂಡರ ವಿಶ್ವಾಸವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


